March 31, 2020

ತರಳಬಾಳು ಜಗದ್ಗುರುಗಳಿಂದ ಚಪ್ಪಾಳೆ

ಸಿರಿಗೆರೆ, ಮಾ.22- ಕೊರೊನಾ ವೈರಸ್ ಹಿಮ್ಮೆಟ್ಟಿಸಲು ಪ್ರಧಾನಿ ನರೇಂದ್ರ ಮೋದಿ ಕರೆ ಕೊಟ್ಟಿದ್ದ ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ತರಳಬಾಳು ಜಗದ್ಗುರು
ಶ್ರೀ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಮಠದಲ್ಲಿದ್ದು, ಸಾರ್ವಜನಿಕರಿಗೆ ಅಗತ್ಯ ಸೇವೆ ಪೂರೈಸಿದವರಿಗೆ ಚಪ್ಪಾಳೆ ತಟ್ಟುವುದರ ಮೂಲಕ ಕೃತಜ್ಞತೆ ಸಲ್ಲಿಸಿದರು.