ದಾವಣಗೆರೆ ಪಾಲಿಕೆ ಮೇಯರ್ ಸ್ಥಾನ ಸಾಮಾನ್ಯಕ್ಕೆ

ಬೆಂಗಳೂರು, ಡಿ. 26 – ದಾವಣಗೆರೆ ಪಾಲಿಕೆ ಮೇಯರ್ ಸ್ಥಾನವನ್ನು ಸಾಮಾನ್ಯಕ್ಕೆ ನಿಗದಿ ಪಡಿಸಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ.

ಉಪ  ಮೇಯರ್ ಸ್ಥಾನವನ್ನು ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲು ಇಡಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಗುರುವಾರ ಆದೇಶ ಹೊರಡಿಸಿದ್ದಾರೆ.

ದಾವಣಗೆರೆ ಅಲ್ಲದೇ ಇತರೆ 10 ನಗರ ಪಾಲಿಕೆಗಳ ಮೇಯರ್ ಹಾಗೂ ಉಪ ಮೇಯರ್ ಸ್ಥಾನಕ್ಕೆ ಮೀಸಲಾತಿ ಪ್ರಕಟಿಸಲಾಗಿದೆ.