ಸುದ್ದಿಗಳು

Home ಸುದ್ದಿಗಳು
ಸದಾಶಿವ ಆಯೋಗದ ವರದಿ ಜಾರಿಗೆ, ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಒತ್ತಾಯ

ಸದಾಶಿವ ಆಯೋಗದ ವರದಿ ಜಾರಿಗೆ, ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಒತ್ತಾಯ

ಸದಾಶಿವ ಆಯೋಗದ ವರದಿಯನ್ನು ಜಾರಿ ಮಾಡುವಲ್ಲಿ  ಮುಖ್ಯಮಂತ್ರಿಗಳ ಮೇಲೆ ಒತ್ತಡ ತರುವಂತೆ  ನಗರಕ್ಕೆ ನಿನ್ನೆ ಆಗಮಿಸಿದ್ದ ಉಪ ಮುಖ್ಯಮಂತ್ರಿ ಹಾಗೂ ಸಮಾಜ ಕಲ್ಯಾಣ ಸಚಿವ ಗೋವಿಂದ ಎಂ. ಕಾರಜೋಳ ಅವರನ್ನು ಸೋಮಲಾಪುರ ಒತ್ತಾಯಿಸಿದ್ದಾರೆ.

ಎಸ್‍ಸಿಪಿ – ಟಿಎಸ್‍ಪಿ ಹಣ ರಸ್ತೆ ಕಾಮಗಾರಿಗೆ ಬೇಡ

ಎಸ್‍ಸಿಪಿ – ಟಿಎಸ್‍ಪಿ ಹಣ ರಸ್ತೆ ಕಾಮಗಾರಿಗೆ ಬೇಡ

ಎಸ್‍ಸಿಪಿ ಮತ್ತು ಟಿಎಸ್‍ಪಿ ಯೋಜನೆಯ ಹಣವನ್ನು ಅವರ ಅಭಿವೃದ್ಧಿಗೆ ಮಾತ್ರ ವಿನಿಯೋಗಿಸಬೇಕೇ ಹೊರತು ರಸ್ತೆ ಕಾಮಗಾರಿಗೆ ಬಳಸಬೇಡಿ ಎಂದು ಅಧಿಕಾರಿಗಳಿಗೆ ಗೋವಿಂದ ಎಂ.ಕಾರಜೋಳ ತಿಳಿಸಿದ್ದಾರೆ. 

ಕೊಮಾರನಹಳ್ಳಿ ಕೆರೆ ಭರ್ತಿಗೆ 4 ಅಡಿ ಬಾಕಿ ಪ್ರಾಣಿ – ಪಕ್ಷಿಗಳಿಗೆ, ದನ-ಕರುಗಳಿಗೆ ಆಸರೆ

ಕೊಮಾರನಹಳ್ಳಿ ಕೆರೆ ಭರ್ತಿಗೆ 4 ಅಡಿ ಬಾಕಿ ಪ್ರಾಣಿ – ಪಕ್ಷಿಗಳಿಗೆ, ದನ-ಕರುಗಳಿಗೆ ಆಸರೆ

ಮಲೇಬೆನ್ನೂರು : ಕೊಮಾರನ ಹಳ್ಳಿಯ ಹೆಳವನಕಟ್ಟೆ ಶ್ರೀ ಲಕ್ಷ್ಮೀ ರಂಗನಾಥ ಸ್ವಾಮಿಯ  ಕೆರೆಗೆ ಮತ್ತಷ್ಟು ನೀರು ಹರಿದು ಬಂದಿದ್ದು,  ಕಳೆದ ಭಾನುವಾರ ಮತ್ತು ಮಂಗಳವಾರ ಸುರಿದ ಮಳೆಯಿಂದಾಗಿ ಕೆರೆ ಭರ್ತಿಗೆ  4 ಅಡಿ ಮಾತ್ರ ಬಾಕಿ ಇದೆ.

ನಾಡು-ನುಡಿ ರಕ್ಷಣೆ, ಮಾತೃಭಾಷೆಗೆ ಪ್ರಾಮುಖ್ಯತೆ ಅಗತ್ಯ

ನಾಡು-ನುಡಿ ರಕ್ಷಣೆ, ಮಾತೃಭಾಷೆಗೆ ಪ್ರಾಮುಖ್ಯತೆ ಅಗತ್ಯ

ಮಗುವಿನ ಸರ್ವಾಂಗೀಣ ಬೆಳವಣಿಗೆಗೆ, ನಾಡಿನ ಸಾಹಿತ್ಯ ಹಾಗೂ ಸಂಸ್ಕೃತಿಯ ಸಂರಕ್ಷಣೆಗೆ ಮಾತೃ ಭಾಷೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಹೆಚ್.ಎಸ್. ಮಂಜುನಾಥ ಕುರ್ಕಿ ಹೇಳಿದರು.

ಕೊಪ್ಪ ಪೊಲೀಸರ ಮೇಲೆ ಕ್ರಮಕ್ಕೆ ಆಗ್ರಹ

ಕೊಪ್ಪ ಪೊಲೀಸರ ಮೇಲೆ ಕ್ರಮಕ್ಕೆ ಆಗ್ರಹ

ಸಾಮಾಜಿಕ ಹೋರಾಟಗಾರ ಕೆ.ಎಲ್.ಅಶೋಕ್ ಮತ್ತು ಅವರ ಕುಟುಂ ಬದ ಸದಸ್ಯರ ಮೇಲೆ ದುರುದ್ದೇಶಪೂರ್ವಕವಾಗಿ ಕಿರುಕುಳ ನೀಡಿದ ಕೊಪ್ಪ ಪೊಲೀಸರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ಪ್ರತಿಭಟಿಸಲಾಯಿತು.

ರೈತ ವಿರೋಧಿ ನೀತಿಗಳನ್ನು ಕೈ ಬಿಡಲು ಆಗ್ರಹ

ರೈತ ವಿರೋಧಿ ನೀತಿಗಳನ್ನು ಕೈ ಬಿಡಲು ಆಗ್ರಹ

ಮೆಕ್ಕೆಜೋಳ ಖರೀದಿ ಕೇಂದ್ರ, ಭೂಮಿ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ಖಾಸಗೀಕರಣದ ಬಗ್ಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ತಾಲ್ಲೂಕಿನ ವಿವಿಧ ಗ್ರಾಮಗಳ ಗ್ರಾಮ ಪಂಚಾಯಿತಿ ಭಾಗದಲ್ಲಿ ಹೋರಾಟದ ಜೊತೆಗೆ ಅರಿವು ಮೂಡಿಸಲಾಯಿತು.

ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಶೀಘ್ರ ಮುಕ್ತಾಯಗೊಳಿಸಲು ಸೂಚನೆ

ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಶೀಘ್ರ ಮುಕ್ತಾಯಗೊಳಿಸಲು ಸೂಚನೆ

ಮಹಾನಗರ ಪಾಲಿಕೆಯ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ಸ್ಮಾರ್ಟ್‍ಸಿಟಿ ಯೋಜನೆಯ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರ ಅಧ್ಯಕ್ಷತೆಯಲ್ಲಿ ನಡೆಯಿತು

ಮಹಾ ನಾಯಕ ಧಾರಾವಾಹಿ ನಿಲ್ಲಿಸುವಂತೆ ಕೊಲೆ ಬೆದರಿಕೆ : ಕಾನೂನು ಕ್ರಮಕ್ಕೆ ಒತ್ತಾಯ

ಮಹಾ ನಾಯಕ ಧಾರಾವಾಹಿ ನಿಲ್ಲಿಸುವಂತೆ ಕೊಲೆ ಬೆದರಿಕೆ : ಕಾನೂನು ಕ್ರಮಕ್ಕೆ ಒತ್ತಾಯ

ಹರಪನಹಳ್ಳಿ : ಮಹಾ ನಾಯಕ ಧಾರಾವಾಹಿ ನಿಲ್ಲಿಸುವಂತೆ ಕೊಲೆ ಬೆದರಿಕೆ ಹಾಕಿ ದವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಮಾದಿಗ ಮಹಾಸಭಾದ ತಾಲ್ಲೂಕು ಅಧ್ಯಕ್ಷ ಯರಬಾಳು ಹನುಮಂತಪ್ಪ  ಒತ್ತಾಯಿಸಿದ್ದಾರೆ.

ಡ್ರಗ್ಸ್ ದಂಧೆ : ಜೀವಾವಧಿ ಶಿಕ್ಷೆ ವಿಧಿಸಲು ಎಐವೈಎಫ್ ಒತ್ತಾಯ

ಡ್ರಗ್ಸ್ ದಂಧೆ : ಜೀವಾವಧಿ ಶಿಕ್ಷೆ ವಿಧಿಸಲು ಎಐವೈಎಫ್ ಒತ್ತಾಯ

ಡ್ರಗ್ಸ್ ದಂಧೆಯಲ್ಲಿ ತೊಡಗಿರುವವರಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ಅಖಿಲ ಭಾರತ ಯುವಜನ ಫೆಡರೇಷನ್ (ಎಐವೈಎಫ್) ಜಿಲ್ಲಾ ಸಮಿತಿ ವತಿಯಿಂದ ನಗರದ ಉಪವಿಭಾಗಾಧಿಕಾರಿ ಕಚೇರಿ ಮುಂಭಾಗದಲ್ಲಿಂದು ಪ್ರತಿಭಟನೆ ನಡೆಸಿ ನಂತರ ಮನವಿ ಸಲ್ಲಿಸಿದರು

ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಬೆಂಬಲಿಸಿ

ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಬೆಂಬಲಿಸಿ

ಹೊನ್ನಾಳಿ : ಖಾಸಗಿ ಶಿಕ್ಷಣ ಸಂಸ್ಥೆಗಳಿಗಿಂತ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಲಭಿಸುತ್ತಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವ ಗೋವಿಂದ ಎಂ.ಕಾರಜೋಳ ಹೇಳಿದರು.

ಟೈಲರ್ ಕಲ್ಯಾಣ ಮಂಡಳಿ ರಚನೆಗೆ ಆಗ್ರಹ

ಟೈಲರ್ ಕಲ್ಯಾಣ ಮಂಡಳಿ ರಚನೆಗೆ ಆಗ್ರಹ

ಪ್ರಸ್ತುತ ರಾಜ್ಯದಲ್ಲಿ ಜಾರಿಯಲ್ಲಿರುವ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಮಾದರಿಯಲ್ಲಿ ಟೈಲರ್ ಕಲ್ಯಾಣ ಮಂಡಳಿಯನ್ನು ಜಾರಿಗೆ ತರುವಂತೆ ಒತ್ತಾಯಿಸಿ, ಕರ್ನಾಟಕ ರಾಜ್ಯ ಟೈಲರ್ಸ್ ಮತ್ತು ಸಹಾಯಕರ ಫೆಡರೇಶನ್ ನೇತೃತ್ವದಲ್ಲಿ ಪ್ರತಿಭಟಿಸಲಾಯಿತು.