ಜಿಲ್ಲಾದ್ಯಂತ ಮದ್ಯ ನಿಷೇಧ

ದಾವಣಗೆರೆ, ಮಾ. 23 – ಕೊರೊನಾ ವೈರಸ್ ಹರಡುತ್ತಿರುವುದನ್ನು ತಡೆಯುವ ಸಲುವಾಗಿ ಜಿಲ್ಲಾದ್ಯಂತ ಮದ್ಯ ಮಾರಾಟ ಹಾಗೂ ಸಾಗಾಣಿಕೆಯನ್ನು ನಿಷೇಧಿಸಲಾಗಿದೆ.

ಮುಂಜಾಗ್ರತಾ ದೃಷ್ಟಿಯಿಂದ ಮಂಗಳವಾರದಿಂದಲೇ ಜಾರಿಗೆ ಬರುವಂತೆ ಏಪ್ರಿಲ್ 1ರವರೆಗೆ ಮದ್ಯ ನಿಷೇಧ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ಮಹಾತೇಶ್ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಆದೇಶವನ್ನು ಸಂಬಂಧಪಟ್ಟ ಅಬಕಾರಿ, ಪೊಲೀಸ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಗಿದೆ.