ಮಠಾಧೀಶರ ಒಕ್ಕೂಟದಿಂದ ಕೋವಿಡ್ ಪರಿಹಾರ ನಿಧಿಗೆ 1.10 ಲಕ್ಷ ರೂ. ದೇಣಿಗೆ

ಮಠಾಧೀಶರ ಒಕ್ಕೂಟದಿಂದ ಕೋವಿಡ್ ಪರಿಹಾರ ನಿಧಿಗೆ 1.10 ಲಕ್ಷ ರೂ. ದೇಣಿಗೆ

ಮಲೇಬೆನ್ನೂರು, ಮೇ 26- ಹಿಂದುಳಿದ, ದಲಿತ, ಮಠಾಧೀಶರ ಒಕ್ಕೂಟದ ನಿಯೋಗವು ಮಂಗಳವಾರ ಬೆಂಗಳೂರಿನಲ್ಲಿ  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ,  ಕೋವಿಡ್-19 ಪರಿಹಾರ ನಿಧಿಗೆ ಒಂದು ಲಕ್ಷದ ಹತ್ತು ಸಾವಿರ ರೂಪಾಯಿಗಳ ಡಿ.ಡಿ. ನೀಡಿದರು.

ಕೊರೊನಾ ವೈರಸ್ ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಮಠಾಧೀಶರು ಮೆಚ್ಚುಗೆ ವ್ಯಕ್ತಪಡಿಸಿದರು. ಯಡಿಯೂರಪ್ಪ ಅವರು ಮಠಾಧೀಶರ ಸಹಕಾರ ಮತ್ತು ಕಳಕಳಿಯನ್ನು ಕೊಂಡಾಡಿದರು.

ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಕುಂಚಟಿಗ ಗುರುಪೀಠದ ಶ್ರೀ ಶಾಂತವೀರ ಸ್ವಾಮೀಜಿ,  ಉಪ್ಪಾರ ಗುರುಪೀಠದ ಜಗದ್ಗುರು ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ, ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀ  ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ, ಹೊಸದುರ್ಗ  ಕನಕ ಗುರುಪೀಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ,  ಮಡಿವಾಳ ಗುರುಪೀಠದ ಜಗದ್ಗುರು ಶ್ರೀ ಬಸವ ಮಾಚಿದೇವ ಸ್ವಾಮೀಜಿ, ಈಡಿಗರ ಗುರುಪೀಠದ ಜಗದ್ಗುರು ಶ್ರೀ ರೇಣುಕಾನಂದ ಸ್ವಾಮೀಜಿ, ಯಾದವ ಗುರುಪೀಠದ ಜಗದ್ಗುರು ಶ್ರೀ ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ, ಹಡಪದ ಗುರುಪೀಠದ ಜಗದ್ಗುರು ಶ್ರೀ ಅನ್ನದಾನಿ ಅಪ್ಪಣ್ಣ ಭಾರತಿ ಸ್ವಾಮೀಜಿ, ಕೂಡಲಸಂಗಮ ಪಂಚಮಸಾಲಿ ಗುರುಪೀಠದ ಜಗದ್ಗುರು ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ,  ಅಂಬಿಗರ ಗುರುಪೀಠದ ಜಗದ್ಗುರು ಶ್ರೀ ಶಾಂತಭೀಷ್ಮ  ಚೌಡಯ್ಯ ಸ್ವಾಮೀಜಿ ಅವರುಗಳು ಸಿಎಂ ಭೇಟಿ ನಿಯೋಗದಲ್ಲಿದ್ದರು.

Leave a Reply

Your email address will not be published.