ಮುಂದೆ ನಮ್ಮದೇ ಅಧಿಕಾರ

ಮುಂದೆ ನಮ್ಮದೇ ಅಧಿಕಾರ

ಕಾಂಗ್ರೆಸ್ ಮುನ್ನಡೆಸಲು ಡಿಕೆಶಿ ಸೂಕ್ತ ವ್ಯಕ್ತಿ: ಮಾಜಿ ಸಚಿವ ಎಸ್ಸೆಸ್ಸೆಂ

ದಾವಣಗೆರೆ, ಜು.2- `ವೇಟ್ ಅಂಡ್ ವಾಚ್’ ಮುಂದೆ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರುತ್ತೆ. ಪಕ್ಷವನ್ನು ಒಗ್ಗಟ್ಟಿನಿಂದ ಮುನ್ನಡೆ ಸಲು ಡಿ.ಕೆ. ಶಿವಕುಮಾರ್ ಅವರೇ ಸೂಕ್ತ ವ್ಯಕ್ತಿ ಎಂದು ಮಾಜಿ ಸಚಿವ ಶಾಮನೂರು ಮಲ್ಲಿಕಾರ್ಜುನ್ ಹೇಳಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕು ಮಾರ್ ಅವರ ಪದಗ್ರಹಣ ಸಮಾ ರಂಭದ ನೇರ ಪ್ರಸಾರ ವೀಕ್ಷಣೆ ಹಾಗೂ ಸ್ಥಳೀಯ ಕಾರ್ಯಕರ್ತರ ಪ್ರತಿಜ್ಞಾ ವಿಧಿ ಸ್ವೀಕಾರ ಸಮಾ ರಂಭದಲ್ಲಿ ಪಾಲ್ಗೊಂಡು ಪತ್ರಕರ್ತ ರೊಂದಿಗೆ ಅವರು ಮಾತನಾಡಿದರು.

ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹುಮ್ಮಸ್ಸು ತುಂಬಿ ಮತ್ತೆ ಪಕ್ಷ ಅಧಿಕಾರಕ್ಕೆ ಶ್ರಮಿಸಲಿದ್ದಾರೆ. ಜೊತೆಗೆ ಕಾರ್ಯಕರ್ತರು, ಮುಖಂಡರು ಎಲ್ಲರೂ ಸೇರಿ ಸಂಘ ಟಿತರಾಗಿ ಡಿಕೆಶಿ ಅವರ ಕೈ ಬಲಪಡಿ ಸುವ ಅಗತ್ಯವಿದೆ ಎಂದರು.

ಡಿಕೆಶಿ ಅವರ ಜೊತೆ ಕಾರ್ಯಾ ಧ್ಯಕ್ಷರಾಗಿ ಸತೀಶ್ ಜಾರಕಿಹೊಳಿ, ಸಲೀಂ ಅಹ್ಮದ್, ಈಶ್ವರ ಖಂಡ್ರೆ ಅವರೂ ಅಧಿಕಾರ ಸ್ವೀಕರಿಸಲಿದ್ದು, ಪಕ್ಷಕ್ಕೆ ಮತ್ತಷ್ಟು ಬಲ ಬಂದಿದೆ. ಕಾಂಗ್ರೆಸ್ ಪಾಳೆಯದಲ್ಲಿ ಹುಮ್ಮಸ್ಸು ಹೆಚ್ಚಿದೆ. 

ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯ್ತಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಯ ವಾರ್ಡು ಗಳ ಮಟ್ಟದಲ್ಲಿ ಪ್ರತಿಯೊಬ್ಬರೂ ನೇರ ಪ್ರಸಾರ ವೀಕ್ಷಿಸುತ್ತಾ, ಪ್ರತಿಜ್ಞಾ ವಿಧಿ ಸ್ವೀಕರಿಸುತ್ತಿದ್ದಾರೆ. ಎಲ್ಲೆಡೆ ಪಕ್ಷಕ್ಕೆ ಸಾಕಷ್ಟು ಬೆಂಬಲ ವ್ಯಕ್ತವಾಗುತ್ತಿದೆ ಎಂದರು.

ನಾವು ಕಾಂಗ್ರೆಸ್ ಪಕ್ಷದವರೇ, ಮೊದಲಿನಿಂದಲೇ ಕೆಪಿಸಿಸಿಯಲ್ಲಿ ಯೇ ಇದ್ದೇವೆ. ನಾವೇನು ಉನ್ನತ ಸ್ಥಾನಗಳನ್ನು ಕೊಡಿ  ಎಂದು ಕೇಳಿಲ್ಲ. ಕೇಳಿದರೆ ಕೊಟ್ಟೇ ಕೊಡುತ್ತಾರೆ. ಜಿಲ್ಲೆಯಲ್ಲಿ ಸಕ್ರಿಯ ರಾಜಕಾರ ಣದಲ್ಲಿದ್ದೇನೆ.  ಮುಂದೆ ಯೂ ಇರುತ್ತೇನೆ ಎಂದು ಪತ್ರಕರ್ತರ ಪ್ರಶ್ನೆ ಯೊಂದಕ್ಕೆ ಎಸ್ಸೆಸ್ಸೆಂ ಉತ್ತರಿಸಿದರು.

ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಬಿ. ಮಂಜಪ್ಪ ಮಾತನಾ ಡುತ್ತಾ,  ಡಿ.ಕೆ. ಶಿವಕುಮಾರ್ ಅವರಂತಹ ಧೀಮಂತ ನಾಯಕ ಅಧ್ಯಕ್ಷರಾಗುತ್ತಿರುವುದು ಎಲ್ಲರಲ್ಲೂ ಉತ್ಸಾಹ ಹೆಚ್ಚಿಸಿದೆ. ಸಿದ್ಧರಾಮ ಯ್ಯನವರೂ ಡಿಕೆಶಿ ಅವರ ನಾಯ ಕತ್ವ ಬೆಂಬಲಿಸಿದ್ದಾರೆ. ಮುಂದಿನ ದಿನಗಳಲ್ಲಿ ಈ ಎಲ್ಲರ ನಾಯಕತ್ವದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜಿಲ್ಲೆಯ 206 ಗ್ರಾ.ಪಂ., ಪಟ್ಟಣ ಪಂಚಾಯ್ತಿ,  ಪುರಸಭೆ, ನಗರಸಭೆ ಹಾಗೂ ಪಾಲಿಕೆಯ ವಾರ್ಡುಗಳಲ್ಲಿ ಪದಗ್ರಹಣ ಸಮಾರಂಭ ನಡೆಯುತ್ತಿದ್ದು, ಪಕ್ಷವನ್ನು ತಳಮಟ್ಟದಲ್ಲಿ ಸಂಘಟಿಸಿ, ಮುಂದಿನ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ ಎಂದು ಹೇಳಿದರು.

ಕೆಪಿಸಿಸಿ ವೀಕ್ಷಕರಾದ ಅಮೃತೇಶ್, ಪಾಲಿಕೆ ವಿಪಕ್ಷ ನಾಯಕ ಎ.ನಾಗರಾಜ್, ಸೈಯದ್ ಸೈಫುಲ್ಲಾ, ಡಿ.ಬಸವರಾಜ್, ಖಾಸಿಂ ಸಾಬ್, ಅನಿತಾ ಬಾಯಿ ಮಾಲತೇಶ್ ಜಾಧವ್, ಹಾಲೇಶ್ ಸೇರಿದಂತೆ ವಿವಿಧ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published.