ಚೆನ್ನಮ್ಮ ಶಾಲೆ ಕೋವಿಡ್ ಆಸ್ಪತ್ರೆ

ಹರಪನಹಳ್ಳಿ, ಜು.3- ದಿನದಿಂದ ದಿನಕ್ಕೆ  ಹೆಚ್ಚುತ್ತಿರುವ ಕೊರೊನಾ ವೈರಸ್‌ನಿಂದ ಹರಪನಹಳ್ಳಿ  ತಾಲ್ಲೂಕಿನ  ಹರಿಹರ ರಸ್ತೆಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯನ್ನು ಕೋವಿಡ್-19 ಆಸ್ಪತ್ರೆಯನ್ನಾಗಿ ಸಿದ್ದಪಡಿಸಲಾಗಿದೆ.

ಈ ಕುರಿತು ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಈ ವಸತಿ ಶಾಲೆಯಲ್ಲಿ 100 ಹಾಸಿಗೆಗಳನ್ನು ಸಿದ್ದಪಡಿಸಲಾಗಿದೆ. ಇಲ್ಲಿ ಪಾಳೆಯದಂತೆ ಒಬ್ಬೊಬ್ಬ ವೈದ್ಯರು ಕರ್ತವ್ಯ ನಿರ್ವಹಿಸುತ್ತಾರೆ.

ಹರಪನಹಳ್ಳಿ, ಹೂವಿನ ಹಡಗಲಿ, ಕೊಟ್ಟೂರು ತಾಲ್ಲೂಕುಗಳಲ್ಲಿ ಯಾವುದೇ ರೋಗ ಲಕ್ಷಣಗಳು ಇಲ್ಲದೇ ಕೋವಿಡ್ ಸೋಂಕಿತರಾದವರು ಕಂಡುಬಂದರೆ ಅಂತವರನ್ನು ಈ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಆಸ್ಪತ್ರೆಗೆ ಸೇರ್ಪಡೆ ಮಾಡಲಾಗುವುದು ಎಂದು ಆರೋಗ್ಯ ಇಲಾಖೆ ಮೂಲ ಗಳು ತಿಳಿಸಿವೆ.

ಹರಪನಹಳ್ಳಿ ತಾಲ್ಲೂಕಿನ ನಜೀರ್ ನಗರದ  ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕೊಟ್ಟೂರು ತಾಲ್ಲೂಕಿನ ಕೋಗಳಿ ಗ್ರಾಮದ ವ್ಯಕ್ತಿಯೊಬ್ಬರು ಕ್ವಾರಂಟೈನ್‌ನಲ್ಲಿದ್ದು, ಈಗ ಅವರಿಗೆ ಕೊರೊನಾ ಸೋಂಕು ದೃಢ ಪಟ್ಟಿದ್ದು, ಈಗ ಆ ಸೋಂಕಿತ ವ್ಯಕ್ತಿಯನ್ನು ಪ್ರಥಮವಾಗಿ  ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published.