ಕೋವಿಡ್ ನಿಯಂತ್ರಣಕ್ಕೆ ಟಾಸ್ಕ್‌ಫೋರ್ಸ್‌ಗಳ ಸಮೀಕ್ಷೆ

ಕೋವಿಡ್ ನಿಯಂತ್ರಣಕ್ಕೆ  ಟಾಸ್ಕ್‌ಫೋರ್ಸ್‌ಗಳ ಸಮೀಕ್ಷೆ

ದಾವಣಗೆರೆ, ಜು.23- ಕೋವಿಡ್-19 ಸೋಂಕು ನಿಯಂ ತ್ರಣಕ್ಕಾಗಿ ಪಾಲಿಕೆ ವ್ಯಾಪ್ತಿಯ 45 ವಾರ್ಡ್‌ಗಳಲ್ಲಿ ಸದಸ್ಯರುಗಳ ಅಧ್ಯಕ್ಷತೆಯಲ್ಲಿ ವಾರ್ಡ್‌ಮಟ್ಟದ ಟಾಸ್ಕ್‌ಫೋರ್ಸ್‌ ಮತ್ತು 377 ಬೂತ್‌ಗಳಲ್ಲಿ ಬೂತ್ ಮಟ್ಟದ ಟಾಸ್ಕ್‌ಫೋರ್ಸ್‌ಗಳನ್ನು ರಚನೆ ಮಾಡಲಾಗಿದೆ. 

ಪಾಲಿಕೆಯ ವ್ಯಾಪ್ತಿಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಾರ್ಡ್‌ ಮಟ್ಟದ ಟಾಸ್ಕ್‌ಫೋರ್ಸ್‌ ಮತ್ತು ಬೂತ್‌ಮಟ್ಟದ ಟಾಸ್ಕ್‌ ಫೋರ್ಸ್‌ಗಳ ಸಹಯೋಗದೊಂದಿಗೆ ಮನೆ ಮನೆ ಸಮೀಕ್ಷೆ ನಡೆಸಿ, 60 ವರ್ಷ ಮೇಲ್ಪಟ್ಟ ಹಾಗೂ ಇತರೆ ಕಾಯಿಲೆಗಳಿಂದ ಬಳಲುತ್ತಿರುವ ಜನರ ಸಮೀಕ್ಷೆ ಮಾಡಿ, ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿ, ಚಿಕಿತ್ಸೆ ಕೊಡಿಸುವ ಉದ್ದೇಶದಿಂದ ಮನೆ ಮನೆ ಸಮೀಕ್ಷೆ ಕಾರ್ಯವನ್ನು ನಗರದ ಎಲ್ಲಾ ವಾರ್ಡ್‌ಗಳಲ್ಲಿ ಹಮ್ಮಿಕೊಳ್ಳಲಾಗಿದೆ. 

ಪ್ರಾರಂಭಿಕವಾಗಿ ವಾರ್ಡ್ ನಂ. 6, 8 ಮತ್ತು 11 ರಲ್ಲಿ ಸಮೀಕ್ಷಾ ಕಾರ್ಯಕ್ಕೆ ಚಾಲನೆ ನೀಡಲಾಯಿತು. 

ಅಪರ ಜಿಲ್ಲಾಧಿಕಾರಿ ವೀರಬಸಪ್ಪ ಪೂಜಾರ್, ಉಪ ವಿಭಾಗಾಧಿಕಾರಿ ಶ್ರೀಮತಿ ಮಮತಾ ಹೊಸಗೌಡರ್, ನಗರ ಪಾಲಿಕೆ ಸದಸ್ಯ ಎಲ್.ಡಿ. ಗೋಣಪ್ಪ, ನಗರ ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ತಹಶೀಲ್ದಾರ್ ಗಿರೀಶ್, ಉಪ ತಹಶೀಲ್ದಾರ್ ಜಗನ್ನಾಥ್ ಮತ್ತಿತರರಲ್ಲದೇ, ಆಶಾ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Leave a Reply

Your email address will not be published.