ಉತ್ಸವಾಂಬ ದೇವಸ್ಥಾನದಲ್ಲಿ ಮೂಲಸೌಕರ್ಯದ ಕೊರತೆ

ಹರಪನಹಳ್ಳಿ, ಜು.29- ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಉಚ್ಚಂಗಿದುರ್ಗ ಬೆಟ್ಟದ ಮೇಲಿನ ಉತ್ಸವಾಂಭ ದೇವಸ್ಥಾನದಲ್ಲಿ ಬರುವ ಭಕ್ತರಿಗೆ ಮೂಲ ಸೌಕರ್ಯದ ಕೊರತೆ ಇದೆ ಎಂದು ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ತಿನ ಸದಸ್ಯೆ ವಿಜಯಲಕ್ಷ್ಮಿ ಹಿರೇಮಠ ತಿಳಿಸಿದ್ದಾರೆ.

ಉಚ್ಚಂಗಿದುರ್ಗದ ಉತ್ಸವಾಂಬ ದೇವಸ್ಥಾನಕ್ಕೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ತಮ್ಮನ್ನು ಭೇಟಿಯಾದ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಈ ದೇವಸ್ಥಾನಕ್ಕೆ ರಾಜ್ಯ ಹಾಗೂ ಹೊರ ರಾಜ್ಯ ಗಳಿಂದ ಹುಣ್ಣಿಮೆ, ಶುಕ್ರವಾರ, ಮಂಗಳವಾರಗಳಂದು ಲಕ್ಷಾಂತರ ಭಕ್ತರು ಆಗಮಿಸು ತ್ತಾರೆ, ಆದರೆ ಮೂಲ ಸೌಲಭ್ಯದ ಕೊರತೆ ಎದ್ದು ಕಾಣುತ್ತಿದೆ ಎಂದು ಹೇಳಿದರು.

ಶೌಚಾಲಯವಿಲ್ಲ, ಸ್ನಾನದ ಗೃಹವಿಲ್ಲ  ಹೀಗೆ ಅನೇಕ ಸೌಕರ್ಯಗಳು ಇಲ್ಲವಾಗಿದ್ದು, ಬರುವ ಭಕ್ತರಿಗೆ ಬಹಳಷ್ಟು ತೊಂದರೆಯಾಗುತ್ತಿದೆ ಎಂದು ಅವರು ತಿಳಿಸಿದರು. ಈ ಎಲ್ಲಾ ಕೊರತೆಗಳ ಕುರಿತು ನಮ್ಮ ಧಾರ್ಮಿಕ ಪರಿಷತ್ತಿನ ಅಧ್ಯಕ್ಷರ ಗಮನಕ್ಕೆ ತರಲಾಗುವುದು ಎಂದು ಅವರು ಹೇಳಿದರು.

Leave a Reply

Your email address will not be published.