ಸರಳವಾಗಿ ಬಕ್ರೀದ್ ಆಚರಿಸಲು ಕರೆ

ಹರಪನಹಳ್ಳಿ, ಜು. 31 – ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಬಕ್ರೀದ್ ಹಬ್ಬವನ್ನು  ಸರಳವಾಗಿ ಆಚರಿಸುವಂತೆ ತಾಲ್ಲೂಕು ಅಲ್ಪಸಂಖ್ಯಾತರ ಅಸೋಸಿಯೇಷನ್ ಅಧ್ಯಕ್ಷ ಎ. ಮೂಸಸಾಬ್ ಅವರು ಮನವಿ ಮಾಡಿದ್ದಾರೆ.  

ಈದ್ಗಾ ಮೈದಾನ ಸೇರಿದಂತೆ ವಿವಿಧಡೆಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸದೆ, ತಮ್ಮ ತಮ್ಮ ವ್ಯಾಪ್ತಿಯ ಮಸೀದಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದೂ ಸೇರಿದಂತೆ ಸರ್ಕಾರದ ಮಾರ್ಗಸೂಚಿಗಳನ್ವಯ ಪ್ರಾರ್ಥನೆ ಸಲ್ಲಿಸುವಂತೆ ಅವರು ಕರೆ ನೀಡಿದ್ದಾರೆ. 

Leave a Reply

Your email address will not be published.