ಅಯೋಧ್ಯೆಯಲ್ಲಿ ಶಿಲಾನ್ಯಾಸ : ಶಾಮನೂರಿನಲ್ಲಿ ಶ್ರೀರಾಮನ ಭಾವಚಿತ್ರದ ಮೆರವಣಿಗೆ

ಅಯೋಧ್ಯೆಯಲ್ಲಿ ಶಿಲಾನ್ಯಾಸ : ಶಾಮನೂರಿನಲ್ಲಿ ಶ್ರೀರಾಮನ ಭಾವಚಿತ್ರದ ಮೆರವಣಿಗೆ

ದಾವಣಗೆರೆ, ಆ.5- ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ಶಿಲಾನ್ಯಾಸ ಸಮಾರಂಭದ ಹಿನ್ನೆಲೆಯಲ್ಲಿ ಶಾಮನೂರಿನ ಶ್ರೀರಾಮ ದೇವಸ್ಥಾನ ದಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಲಾಯಿತು. 

ಶ್ರೀ ಆಂಜನೇಯಸ್ವಾಮಿ, ಶ್ರೀ ಈಶ್ವರ ಮತ್ತಿತರೆ ಎಲ್ಲಾ ದೇವಸ್ಥಾನಗಳಲ್ಲೂ ಪೂಜೆ ಸಲ್ಲಿಸಿ, ಪ್ರಸಾದ ವಿತರಿಸಲಾಯಿತು. 

ನಂತರ ಊರಿನ ಪ್ರಮುಖ ಬೀದಿಗಳಲ್ಲಿ ಶ್ರೀರಾಮನ ಭಾವಚಿತ್ರದ ಮೆರವಣಿಗೆ ನಡೆಯಿತು. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಶಿಲಾನ್ಯಾಸದ ಹಿನ್ನೆಲೆಯಲ್ಲಿ ಶಾಮನೂರಿನ ಹಿಂದೂ ಬಾಂಧವರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ನಗರ ಪಾಲಿಕೆ ಮಾಜಿ ಸದಸ್ಯ ಸಂಕೋಳ್ ಚಂದ್ರಶೇಖರ್, ಅನಂತ್ ಶಾಮನೂರು,
ಧನ್ಯ ಕುಮಾರ್, ಕುಂಭಪ್ಪರ ರಾಜಣ್ಣ, ಬಿ.ಎಲ್. ಕೆಂಚನಗೌಡ (ವಾಸು), ಹರೀಶ್, ಕವಿ, ಕರಿಸಿದ್ದಪ್ಪರ ಸುರೇಶ್, ಮಂಜು, ಯೋಗೀಶ್ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published.