ರಾಜ್ಯ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಎಸ್‌ವಿಆರ್ ಅಧಿಕಾರ

ರಾಜ್ಯ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಎಸ್‌ವಿಆರ್ ಅಧಿಕಾರ

ಜಗಳೂರು, ಆ. 6-  ರಾಜ್ಯ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ  ಶಾಸಕ ಎಸ್.ವಿ. ರಾಮಚಂದ್ರ ಅವರು ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಇಂದು ಅಧಿಕಾರ ವಹಿಸಿಕೊಂಡರು. 

ನಿಗಮದ ಹಿರಿಯ ಅಧಿಕಾರಿಗಳು, ಮುಖ್ಯ ಮಂತ್ರಿಗಳ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಬಿಜೆಪಿಯ ಕಾರ್ಯಕರ್ತರು, ಅಭಿಮಾನಿಗಳು ಹಾಜರಿದ್ದು, ನೂತನ ಅಧ್ಯಕ್ಷರಿಗೆ ಶುಭ ಹಾರೈಸಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಎಸ್.ವಿ. ರಾಮಚಂದ್ರ,  ರಾಜ್ಯದಲ್ಲಿ ಪರಿಶಿಷ್ಟ ಪಂಗಡ ಸಮುದಾಯದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತೇನೆ. ಸರಕಾರದ ಸೌಲಭ್ಯಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವ ಜವಾಬ್ದಾರಿಯನ್ನು ನಿಭಾಯಿಸುತ್ತೇನೆ ಎಂದರು. 

ಮಹತ್ವದ ಜವಾಬ್ದಾರಿಯನ್ನು ನೀಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹಾಗೂ ವಾಲ್ಮೀಕಿ ಗುರುಪೀಠದ ಶ್ರೀಗಳಿಗೆ  ಕೃತಜ್ಞತೆ ಸಲ್ಲಿಸಿದರು. ನಂತರ ನಿಗಮದ ಅಧಿಕಾರಿಗಳೊಂದಿಗೆ ಪ್ರಸಕ್ತ ಸಾಲಿನ ಕ್ರಿಯಾ ಯೋಜನೆ ಹಾಗೂ ಯೋಜನೆಗಳ ಮತ್ತು ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸಿದರು. 

 

Leave a Reply

Your email address will not be published.