ನದಿ ಪಾತ್ರದ ನಿವಾಸಿಗಳಿಗೆ ತಹಶೀಲ್ದಾರ್ ಎಚ್ಚರಿಕೆ

ಹರಿಹರ, ಆ.7- ತುಂಗಭದ್ರ ನದಿಗೆ ತುಂಗ ಅಣೆಕಟ್ಟಿನಿಂದ ಹೆಚ್ಚುವರಿ ನೀರನ್ನು ಹರಿಯಬಿಟ್ಟಿ ರುವ ಮತ್ತು ತುಂಗ ಮತ್ತು ಭದ್ರಾ ಅಣೆಕಟ್ಟುಗಳ ಜಲಾನಯನ ಪ್ರದೇಶಗಳಲ್ಲಿ ಭಾರೀ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನ ತುಂಗಭದ್ರ ನದಿ ಪಾತ್ರದ ಗ್ರಾಮಗಳಲ್ಲಿ ಹಾಗೂ ನದಿ ಪಾತ್ರದ ಹರಿಹರ ನಗರದ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ತಹಶೀಲ್ದಾರ್ ತಿಳಿಸಿದ್ದಾರೆ. ಈ ಅವಧಿಯಲ್ಲಿ ನದಿಗೆ ಇಳಿಯುವುದು, ಈಜಾಡುವುದು, ಪಂಪ್‌ಸೆಟ್‌ಗಳಿಂದ ನೀರೆತ್ತುವುದು ಮತ್ತು ದನಕರುಗಳನ್ನು ನದಿ ಪಾತ್ರದಲ್ಲಿ ಮೇಯಿಸಲು ಬಿಡಬಾರದು. ತಗ್ಗು ಪ್ರದೇಶದಲ್ಲಿ ವಾಸವಿರುವ ಜನರು ಎತ್ತರದ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು. ತುರ್ತು ಪರಿಸ್ಥಿತಿಯಲ್ಲಿ ತಾಲ್ಲೂಕು ಆಡಳಿತಕ್ಕೆ ಕೂಡಲೇ ಮಾಹಿತಿ ನೀಡುವಂತೆ ಅವರು ತಿಳಿಸಿದ್ದಾರೆ.

Leave a Reply

Your email address will not be published.