ಎಸ್‍ಡಿಪಿಐ – ಪಿಎಫ್‍ಐ ನಿಷೇಧಕ್ಕೆ ಹಿಂಜಾವೇ ಆಗ್ರಹ

ಎಸ್‍ಡಿಪಿಐ – ಪಿಎಫ್‍ಐ ನಿಷೇಧಕ್ಕೆ ಹಿಂಜಾವೇ ಆಗ್ರಹ

ದಾವಣಗೆರೆ, ಆ.14- ಬೆಂಗಳೂರಿನ ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿ ಪ್ರದೇಶದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಕಾರಣವಾದ ಎಸ್‍ಡಿಪಿಐ, ಪಿಎಫ್‍ಐ ಸಂಘಟನೆಗಳನ್ನು ರಾಜ್ಯದಲ್ಲಿ ನಿಷೇಧಿಸುವಂತೆ ಆಗ್ರಹಿಸಿ ನಗರದಲ್ಲಿ ಇಂದು ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟಿಸಲಾಯಿತು.

ನಗರದ ಜಯದೇವ ವೃತ್ತದಲ್ಲಿ ಜಮಾಯಿಸಿದ್ದ ವೇದಿಕೆ ಮುಖಂಡರು, ಕಾರ್ಯಕರ್ತರು ಬೆಂಗಳೂರಿನಲ್ಲಿ ನಡೆದ ಗಲಭೆ ಘಟನೆ ಖಂಡಿಸಿ ಎಸ್‍ಡಿಪಿಐ, ಪಿಎಫ್‍ಐ ಸಂಘಟನೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಡಿ.ಜಿ. ಹಳ್ಳಿ, ಕೆ.ಜಿ. ಹಳ್ಳಿ ಗಲಭೆ ಪ್ರಕರಣದಲ್ಲಿ ಈ ಸಂಘಟನೆಗಳು ಶಾಮೀಲಾಗಿದ್ದು, ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಬೇಕು. ಮುಂದೆ ಈ ರೀತಿ ಘಟನೆಗಳು ಪುನರಾವರ್ತನೆ ಆಗದಂತೆ ಸರ್ಕಾರ ಗಮನಹರಿಸಬೇಕು ಎಂದು ವೇದಿಕೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಹೆಚ್. ವಿಶ್ವನಾಥ ಒತ್ತಾಯಿಸಿದರು.  

ಪತ್ರಿಭಟನೆಯಲ್ಲಿ ನಗರ ಪಾಲಿಕೆ ಸದಸ್ಯರಾದ ಎಸ್.ಟಿ. ವೀರೇಶ್, ಕೆ.ಎಂ. ವೀರೇಶ್, ವೇದಿಕೆ ಮುಖಂಡರಾದ ಸತೀಶ್ ಪೂಜಾರ್, ಮುತ್ತು, ಮಂಜು, ನವೀನ್, ಪ್ರಕಾಶ್, ಅಣ್ಣಪ್ಪ, ರಾಕೇಶ್, ಚೇತನ್, ಪುನಿತ್ ಸೇರಿದಂತೆ ಇತರರು ಭಾಗವಹಿಸಿದ್ದರು.

Leave a Reply

Your email address will not be published.