ಕೊರೊನಾ ಸೋಂಕಿನಿಂದ ಎಸ್ಸೆಸ್, ಎಸ್ಸೆಸ್ಸೆಂ ಗುಣಮುಖ

ದಾವಣಗೆರೆ, ಆ. 14 – ಕೊರೊನಾ ಸೋಂಕಿನಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರು ಇದೀಗ ಸಂಪೂರ್ಣ ಗುಣಮುಖರಾಗಿದ್ದಾರೆ.

ಇಂದು ಮತ್ತೊಮ್ಮೆ ಪರೀಕ್ಷೆ ಮಾಡಿಸಿದಾಗ ನೆಗೆಟಿವ್ ಬಂದಿದ್ದು, ನಾಳೆ ಬೆಳಿಗ್ಗೆ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದೇನೆ. ಬೆಂಗಳೂರಿನಲ್ಲಿರುವ ಮನೆಯಲ್ಲಿ ಹೋಂ ಕ್ವಾರೆಂಟೈನ್ ಆಗಿ ನಾಲ್ಕು ದಿನಗಳ ನಂತರ ದಾವಣಗೆರೆಗೆ ಬರುವುದಾಗಿ ಎಸ್ಸೆಸ್ `ಜನತಾವಾಣಿ’ಗೆ ತಿಳಿಸಿದ್ದಾರೆ.

ತಮ್ಮ ಪುತ್ರ – ಮಾಜಿ ಸಚಿವ ಶಾಮನೂರು ಮಲ್ಲಿಕಾರ್ಜುನ್ ಅವರೂ ಕೂಡಾ ಕೊರೊನಾ ಸೋಂಕಿ ನಿಂದ ಗುಣಮುಖರಾಗಿದ್ದಾರೆ ಎಂದು ಎಸ್ಸೆಸ್ ವಿವರಿಸಿದ್ದಾರೆ.

Leave a Reply

Your email address will not be published.