ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ

ದಾವಣಗೆರೆ, ಸೆ.14- ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿದ್ದು, ವರದಕ್ಷಿಣೆ ಕಿರುಕುಳ ನೀಡಿ ಗಂಡನ ಮನೆಯವರೇ ಕೊಲೆ ಮಾಡಿರುವುದಾಗಿ ಆಕೆಯ ಕುಟುಂಬದವರು ಶಂಕೆ ವ್ಯಕ್ತಪಡಿಸಿದ್ದಾರೆ. 

ಶಿಲ್ಪಾ (22) ಸಾವನ್ನಪ್ಪಿದ ಮಹಿಳೆ. ದಾವಣಗೆರೆ ತಾಲ್ಲೂಕು ಪರಶುರಾಮಪುರದ ಶಿಲ್ಪ ಅವರನ್ನು ಚನ್ನಗಿರಿ ತಾಲ್ಲೂಕಿನ ದೇವರಹಳ್ಳಿ ಸಮೀಪದ ಹಿರೇಉಡ ತಾಂಡಾದ ದೀಪಕ್ ಅವರೊಂದಿಗೆ ಕಳೆದ ನಾಲ್ಕು ತಿಂಗಳ ಹಿಂದೆ ವಿವಾಹ ಮಾಡಿಕೊಡಲಾಗಿತ್ತು. ವರದಕ್ಷಿಣೆ ಕಿರುಕುಳ ನೀಡಿ ಆಕೆಯನ್ನು ಹತ್ಯೆ ಮಾಡಲಾಗಿದೆ ಎಂದು ಶಿಲ್ಪ ಕುಟುಂಬಸ್ಥರು ಆರೋಪ ಮಾಡಿದ್ದು, ಈ ಬಗ್ಗೆ ಚನ್ನಗಿರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.  ಪತಿ ದೀಪಕ್ ಹಾಗೂ ಅವರ ಕುಟುಂಬ ಸದಸ್ಯರು ನಾಪತ್ತೆಯಾಗಿದ್ದಾರೆನ್ನಲಾಗಿದೆ.

Leave a Reply

Your email address will not be published.