ಪೋಷಣ್ ಅಭಿಯಾನಕ್ಕೆ ಚಾಲನೆ

ಪೋಷಣ್ ಅಭಿಯಾನಕ್ಕೆ ಚಾಲನೆ

ರಾಣೆಬೆನ್ನೂರು, ಸೆ.15- ಪೋಷಣ್ ಮಾಸಾಚರಣೆ ಅಂಗವಾಗಿ ಪೋಷಣ್ ರಥಕ್ಕೆ ಶಾಸಕ ಅರುಣಕುಮಾರ ಪೂಜಾರ ಹಾಗೂ ಜಿಲ್ಲಾ ಪಂಚಾಯತ್‌ ಸದಸ್ಯೆ ಗದಿಗೆವ್ವ ದೇಸಾಯಿ ಹಸಿರು ನಿಶಾನೆ ತೋರುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆ ಮಂಗಳಗೌರಿ ಪೂಜಾರ, ತಾಲ್ಲೂಕು ಪಂಚಾಯತ್ ಅಧ್ಯಕ್ಷೆ ಗೀತಾ ವಸಂತ ಲಮಾಣಿ, ಉಪಾಧ್ಯಕ್ಷೆ ಕಸ್ತೂರವ್ವ ಹೊನ್ನಾಳಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚೋಳಪ್ಪ ಕಸವಾಳ, ತಹಶೀಲ್ದಾರ್ ಬಸವನಗೌಡ ಕೋಟೂರ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎಮ್.ಕಾಂಬಳೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಜಯಶ್ರೀ ಪಾಟೀಲ ಹಾಗೂ ಇಲಾಖೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.

Leave a Reply

Your email address will not be published.