ಸ್ಥಳೀಯ ಸಂಸ್ಥೆಗಳ ಉಪಚುನಾವಣೆ ನಡೆಸಲು ಎಸ್‌ಓಪಿ ಮಾರ್ಗಸೂಚಿ ರಚನೆ

ದಾವಣಗೆರೆ, ಸೆ.15 – ರಾಜ್ಯ ಚುನಾವಣಾ ಆಯೋಗ ಕರ್ನಾಟಕ ಕೋವಿಡ್-19 ಹಿನ್ನೆಲೆ ಯಲ್ಲಿ ಸ್ಥಳಿಯ ಸಂಸ್ಥೆಗಳ ಸಾರ್ವತ್ರಿಕ ಉಪಚು ನಾವಣೆ ನಡೆಸಲು ಅನುಸರಿಸಬೇಕಾದ ಪ್ರಾಮಾ ಣಿತ ಕಾರ್ಯ ನಿರ್ವಹಣಾ ಪದ್ದತಿ (ಎಸ್‌ಓಪಿ) ಮಾರ್ಗಸೂಚಿಗಳನ್ನು ರಚನೆ ಮಾಡಲಾಗಿದೆ.

ಮುಂಬರಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಕೋವಿಡ್-19 ಹಿನ್ನೆಲೆಯಲ್ಲಿ ನಡೆಸಬೇಕಾಗಿರುತ್ತದೆ. ಕೇಂದ್ರ ಗೃಹ ಮಂತ್ರಾಲಯ ಮತ್ತು ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯ ಕೋವಿಡ್-19 ನಿಯಂತ್ರಣಕ್ಕಾಗಿ ಕಾಲಕಾಲಕ್ಕೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿರುತ್ತದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ ಅನುಸರಿಸಬೇಕಾದ ಪದ್ದತಿಗಳ ಬಗ್ಗೆ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ತಾಂತ್ರಿಕ ನಿಪುಣರೊಂದಿಗೆ ವಿಸ್ತೃತವಾಗಿ ಆಯೋಗದಲ್ಲಿ ಚರ್ಚಿಸಲಾಗಿರುತ್ತದೆ.

ಅವರ ಸಲಹೆಗಳನ್ನು ಪರಿಗಣಿಸಿ, ರಾಜ್ಯ ಚುನಾವಣಾ ಆಯೋಗವು ಚುನಾವಣೆಯ ಸಂದರ್ಭದಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕಿದೆ.

ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಗಳ ಚುನಾವಣೆಯಲ್ಲಿ ಅಭ್ಯರ್ಥಿಗಳು ಗರಿಷ್ಠ 5 ಜನ ಬೆಂಬಲಿಗರೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರಚಾರ ಮಾಡಬಹುದಾಗಿರು ತ್ತದೆ. ಕೋವಿಡ್ ಸೋಂಕಿತ ವ್ಯಕ್ತಿಗಳು ಮತ ಚಲಾಯಿಸಲು ಹಕ್ಕುಳ್ಳವರಾಗಿದ್ದು, ಇವರಿಗೆ ಅಂಚೆ ಮತ ಪತ್ರಗಳ ಮೂಲಕ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ.

ಚುನಾವಣಾ ಕಾರ್ಯದಲ್ಲಿ ನಿರತರಾಗುವ ಎಲ್ಲಾ ಅಧಿಕಾರಿ ಸಿಬ್ಬಂದಿಗಳು ಅವಶ್ಯಕ ಸಾಮಗ್ರಿ ಗಳಾದ ಫೇಸ್‌ಮಾಸ್ಕ್, ಸ್ಯಾನಿಟೈಸರ್, ಥರ್ಮಲ್‌ ಸ್ಕ್ಯಾನರ್, ಇತ್ಯಾದಿಗಳನ್ನು ಉಪಯೋಗಿಸಿ ಕೊಂಡು ಕೋವಿಡ್ ಮಾರ್ಗಸೂಚಿಯನ್ನು ಅನುಸರಿಸಿ, ಚುನಾವಣೆ ನಡೆಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಈ ಬಗ್ಗೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ತಿಳಿಸಿದ್ದಾರೆ.

Leave a Reply

Your email address will not be published.