ಗಂಗನರಸಿ ಸಮುದಾಯ ಭವನ ಆರೋಪ ಸತ್ಯಕ್ಕೆ ದೂರ

ದಾವಣಗೆರೆ, ಅ.11- ಗಂಗನರಸಿ ಗ್ರಾಮದಲ್ಲಿ ನಿರ್ಮಾಣವಾಗಿರುವ ಸಮುದಾಯ ಭವನ ಕಟ್ಟಡದಲ್ಲಿ ಅವ್ಯವಹಾರ ನಡೆದಿದೆ ಎಂದು ಗ್ರಾಮದ ಡಾ. ಕರಿಬಸಪ್ಪ ಅಪಪ್ರಚಾರ ಮಾಡುತ್ತಿರುವುದು ಸತ್ಯಕ್ಕೆ ದೂರವಾದದ್ದು ಎಂದು ಶ್ರೀ ಗೋಣಿ ಬಸವೇಶ್ವರ ಸ್ವಾಮಿ ಮಠ ಹಾಗೂ ಶ್ರೀ ಹನುಮಂತ ದೇವರ ಜೀರ್ಣೋದ್ದಾರ ಸಮಿತಿ ಕಾರ್ಯದರ್ಶಿ ಗೌಡ್ರು ಚನ್ನಬಸಪ್ಪ ತಿಳಿಸಿದ್ದಾರೆ.

ಈ ಸಮುದಾಯ ಭವನ ನಿರ್ಮಾಣಕ್ಕೆ ಸರ್ಕಾರದಿಂದ 50 ಲಕ್ಷ ರೂ. ಮಂಜೂರಾಗಿದೆ. ಇದರಲ್ಲಿ 12 ಲಕ್ಷ ಮೊದಲನೇ ಕಂತು ಬಿಡುಗಡೆಯಾಗಿದೆ. 2ನೇ ಕಂತು 25 ಲಕ್ಷ ಬಿಡುಗಡೆಯಾಗಿದೆ. ಇನ್ನು 3ನೇ ಕಂತು 13 ಲಕ್ಷ ಬಿಡುಗಡೆಯಾಗಿಲ್ಲ ಎಂದ ಅವರು, ದೇವಸ್ಥಾನ ಜಾಗವನ್ನು ಮಾರಿಕೊಂಡಿದ್ದಾರೆ ಎಂದು ಆರೋಪಿಸಿರುವುದು ಬೇಸರ ತಂದಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ  ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಮೇಯರ್ ಹೆಚ್.ಬಿ. ಗೋಣೆಪ್ಪ, ಬಳ್ಳಾರಿ ಷಣ್ಮುಖಪ್ಪ, ತಾಲ್ಲೂಕು ಸಮಿತಿ ಮಾಜಿ ಅಧ್ಯಕ್ಷ ಕೆ.ಬಿ. ಬಸವರಾಜಪ್ಪ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published.