ಯಲ್ಲಮ್ಮ ನಗರದ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಿದ ಎಸ್ಸೆಸ್

ಯಲ್ಲಮ್ಮ ನಗರದ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಿದ ಎಸ್ಸೆಸ್

ದಾವಣಗೆರೆ, ನ.23- ಇಲ್ಲಿನ ಯಲ್ಲಮ್ಮ ನಗರದ 20 ನಿವಾಸಿಗಳಿಗೆ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಇಂದು ಹಕ್ಕುಪತ್ರ ವಿತರಿಸಿದರು.

ಮಾಜಿ ಸಚಿವ ಶಾಮನೂರು ಮಲ್ಲಿಕಾರ್ಜುನ್ ಅವರ ಗೃಹ ಕಚೇರಿ ಶಿವ ಪಾರ್ವತಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಹಕ್ಕುಪತ್ರ ವಿತರಿಸಿದ ಎಸ್ಸೆಸ್, ಕಾಂಗ್ರೆಸ್ ಸರ್ಕಾರದ ಈ ಮಹತ್ವದ ಯೋಜನೆಯಿಂದ ಈ ಹಿಂದೆ  ನಗರದ  ಸಾವಿರಾರು ಕುಟುಂಬಗಳಿಗೆ ಹಕ್ಕುಪತ್ರಗಳನ್ನು ವಿತರಿಸಲಾಗಿತ್ತು. ಕೆಲವು ತಾಂತ್ರಿಕ ತೊಂದರೆಗಳಿಂದ ಹಕ್ಕುಪತ್ರಗಳನ್ನು ನೀಡಲಾಗಿರಲಿಲ್ಲ ಎಂದರು. ಹಕ್ಕುಪತ್ರ ಪಡೆದಿರುವ ಫಲಾನುಭವಿಗಳು ಮಾರಾಟ ಮಾಡದೇ ಆಸ್ತಿ ಉಳಿಸಿಕೊಂಡು ಸದುಪಯೋಗಪಡಿಸಿಕೊಳ್ಳಿ ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ಶ್ರೀಮತಿ ಆಶಾ ಉಮೇಶ್, ದೇವರಮನಿ ಶಿವಕುಮಾರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯ ದರ್ಶಿ ದಿನೇಶ್ ಕೆ.ಶೆಟ್ಟಿ, ಮುಖಂಡರಾದ ಉಮಾ ಶಂಕರ್ ಮತ್ತಿತರರಿದ್ದರು.

Leave a Reply

Your email address will not be published.