ಬ್ಯೂಟಿಪಾರ್ಲರ್ ಅಸೋಸಿಯೇಷನ್‌ನಿಂದ ಕನ್ನಡ ರಾಜ್ಯೋತ್ಸವ

ಬ್ಯೂಟಿಪಾರ್ಲರ್ ಅಸೋಸಿಯೇಷನ್‌ನಿಂದ ಕನ್ನಡ ರಾಜ್ಯೋತ್ಸವ

ದಾವಣಗೆರೆ,ನ.25- ಜಿಲ್ಲಾ ಬ್ಯೂಟಿಪಾರ್ಲರ್ ಅಸೋಸಿಯೇಷನ್‌ ವತಿಯಿಂದ ನಗರದ ರೋಟರಿ ಬಾಲಭವನದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.

ವನಿತಾ ಸಮಾಜದ ಅಧ್ಯಕ್ಷೆ ಲತಿಕಾ ದಿನೇಶ್ ಶೆಟ್ಟಿ ಮಾತನಾಡಿ, ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣು ಮಕ್ಕಳನ್ನು ಎರಡನೇ ದರ್ಜೆ ನಾಗರಿಕರನ್ನಾಗಿ ನೋಡುವ ಪರಿ ಬದಲಿಸುವ ಪ್ರಯತ್ನ ಮಾಡಬೇಕಿದೆ ಎಂದರಲ್ಲದೆ, ಲಾಕ್‌ಡೌನ್ ಸಂದರ್ಭದಲ್ಲಿ ಬ್ಯೂಟಿಷಿಯನ್‌ ವರ್ಗ ಸಾಕಷ್ಟು ಸಂಕಷ್ಟಕ್ಕೆ ಒಳಗಾಗಿರುವುದರ ಕುರಿತು ಹೇಳಿದರು.

ಪಾಲಿಕೆ ವಿಪಕ್ಷ ನಾಯಕ ಎ. ನಾಗರಾಜ್, ಸದಸ್ಯ ದೇವರಮನಿ ಶಿವಕುಮಾರ್ ಶುಭ ಕೋರಿ ಬ್ಯೂಟಿಷಿಯನ್ ಅಸೋಸಿಯೇಷನ್‌ನವರ ಸಮಸ್ಯೆಗಳಿಗೆ ಸದಾ ಸ್ಪಂದಿಸುವುದಾಗಿ ಭರವಸೆ ನೀಡಿದರು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ಮಾತನಾಡಿ, ಸರ್ಕಾರದ ಸಾಲ-ಸೌಲಭ್ಯಗಳ ಬಗ್ಗೆ ಗಮನಕ್ಕೆ ತಂದಲ್ಲಿ ಶಾಸಕ ಎಸ್ಸೆಸ್ ಅವರ ಮೂಲಕ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಜಿಲ್ಲಾ ಬ್ಯೂಟಿಪಾರ್ಲರ್ ಅಸೋಸಿಯೇಷನ್‌ನ ಕವಿತಾ ಚಂದ್ರಶೇಖರ್, ಆಶಾ ಕೃಷ್ಣಮೂರ್ತಿ, ಗೀತಾ, ಪದ್ಮಾವತಿ, ಸೌಮ್ಯ, ಶೈಲಾ ಇನ್ನಿತರರಿದ್ದರು.

Leave a Reply

Your email address will not be published.