ದಾವಣಗೆರೆ, ಜ.18- ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಂಗ ಸಂಸ್ಥೆಯಾದ ಕದಳಿ ಮಹಿಳಾ ವೇದಿಕೆಯ 12ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ವೇದಿಕೆಯ ಗೌರವಾಧ್ಯಕ್ಷರಾದ ಶ್ರೀಮತಿ ಜಯಶೀಲಾ ಹೆಚ್.ಎನ್. ಷಡಾಕ್ಷರಪ್ಪ ಅವರನ್ನು ಸನ್ಮಾನಿಸಲಾಯಿತು. ವೇದಿಕೆಯ ಪದಾಧಿಕಾರಿಗಳಿಗೆ ಸೂಕ್ತ ಸಲಹೆ – ಮಾರ್ಗದರ್ಶನ ಮಾಡುವುದರ ಜೊತೆಗೆ, ವೇದಿಕೆಯ ಎಲ್ಲಾ ಕಾರ್ಯಕ್ರಮಗಳಿಗೆ ನೀಡುತ್ತಿದ್ದ ಪ್ರೋತ್ಸಾಹವನ್ನು ಮೆಲುಕು ಹಾಕುವುದರೊಂದಿಗೆ ಜಯಶೀಲಾ ಅವರನ್ನು ಶಾಲು ಹೊದಿಸಿ, ಸನ್ಮಾನಿಸಿ ಗೌರವಿಸಲಾಯಿತು. ವೇದಿಕೆಯ ಅಧ್ಯಕ್ಷರಾದ ಶ್ರೀಮತಿ ಪಲ್ಲವಿ ಪಾಟೀಲ್, ಶ್ರೀಮತಿ ಸುಧಾ ದಿಬ್ದಳ್ಳಿ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕದಳಿ ಮಹಿಳಾ ವೇದಿಕೆಯಿಂದ ಜಯಶೀಲಾ ಹೆಚ್ಚೆನ್ನೆಸ್ ಅವರಿಗೆ ಸನ್ಮಾನ

Leave a Reply