ರಾಮ ಮಂದಿರ ನಿರ್ಮಾಣ ದೇಣಿಗೆ ಸಂಗ್ರಹಿಸಿದ ಸಂಸದ

ರಾಮ ಮಂದಿರ ನಿರ್ಮಾಣ ದೇಣಿಗೆ ಸಂಗ್ರಹಿಸಿದ ಸಂಸದ

ದಾವಣಗೆರೆ, ಜ.20- ಶ್ರೀರಾಮ ಮಂದಿರ ನಿರ್ಮಾಣಕ್ಕೆ ಬುಧವಾರ ನಗರದಲ್ಲಿ ನಡೆದ ದೇಣಿಗೆ ಸಂಗ್ರಹ ಅಭಿಯಾನದಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ ಪಾಲ್ಗೊಂಡಿದ್ದರು. ವಿದ್ಯಾನಗರದ ಶ್ರೀ ಈಶ್ವರ -ಪಾರ್ವತಿ -ಗಣಪತಿ ದೇವಸ್ಥಾನದಿಂದ ಅಭಿಯಾನ ಆರಂಭಿಸಿ, ಸುತ್ತಮುತ್ತಲಿನ ಪ್ರದೇಶಗಳ ಮನೆಗಳಿಗೆ ತೆರಳಿ ದೇಣಿಗೆ ಸಂಗ್ರಹಿಸಲಾಯಿತು. ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್, ಪಾಲಿಕೆ ಸದಸ್ಯರಾದ ಎಸ್.ಟಿ.ವೀರೇಶ್, ಶೋಭಾ, ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಲೋಕಿಕೆರೆ ನಾಗರಾಜ್ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.