ಶ್ರೀ ಮಹಾಯೋಗಿ ವೇಮನ ಜಯಂತಿ

ಶ್ರೀ ಮಹಾಯೋಗಿ ವೇಮನ ಜಯಂತಿ

ದಾವಣಗೆರೆ, ಜ.22- ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ  ನಗರದ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಶ್ರೀ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮವನ್ನು ಶ್ರೀ ಮಹಾಯೋಗಿ ವೇಮನ ಅವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸುವ ಮೂಲಕ ಸರಳವಾಗಿ ಆಚರಿಸಲಾಯಿತು. 

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ, ವೇಮನ ರೆಡ್ಡಿ ಸಮಾಜದ ಅಧ್ಯಕ್ಷ ಬಿ.ಶ್ರೀನಿವಾಸ ರೆಡ್ಡಿ, ಕಾರ್ಯದರ್ಶಿ ಎಂ. ಶ್ರೀನಿವಾಸ ರೆಡ್ಡಿ, ಉಪಾಧ್ಯಕ್ಷ ಕೆ.ಶ್ರೀನಿವಾಸ ರೆಡ್ಡಿ, ನಿರ್ದೇಶಕ ವೈ.ಶ್ರೀನಿವಾಸ ರೆಡ್ಡಿ, ಮಲ್ಲಮ್ಮ ರೆಡ್ಡಿ ಸಮಾಜದ ಅಧ್ಯಕ್ಷ ಕೊಟ್ರೇಶಪ್ಪ ವೇಮರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ ಉಪಸ್ಥಿತರಿದ್ದರು.

Leave a Reply

Your email address will not be published.