ಎಜಿಬಿಯಿಂದ ವೀರೇಶ್ವರ ಪುಣ್ಯಾಶ್ರಮಕ್ಕೆ ಆಹಾರ ಪದಾರ್ಥಗಳ ವಿತರಣೆ

ಎಜಿಬಿಯಿಂದ ವೀರೇಶ್ವರ ಪುಣ್ಯಾಶ್ರಮಕ್ಕೆ ಆಹಾರ ಪದಾರ್ಥಗಳ ವಿತರಣೆ

ದಾವಣಗೆರೆ, ಜ.26- ನಗರದ ಎಜಿಬಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬಾಡಾ ಕ್ರಾಸ್ ಬಳಿ ಇರುವ ಶ್ರೀ ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ, ಆಶ್ರಮದ ಅಂಧ ಮಕ್ಕಳಿಗೆ ಆಹಾರ ಪದಾರ್ಥಗಳು ಮತ್ತಿತರ ವಸ್ತುಗಳನ್ನು ನೀಡಿ, ಅವರೊಡನೆ ಊಟ ಮಾಡುವುದರ ಮೂಲಕ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿದರು. 

ಕಾರ್ಯಕ್ರಮದಲ್ಲಿ ಆಶ್ರಮದ ಅಂಧ ಮಕ್ಕಳ ಶಿಕ್ಷಣ ಸಮಿತಿಯ ಅಧ್ಯಕ್ಷ ಅಥಣಿ ವೀರಣ್ಣ, ಕಾರ್ಯದರ್ಶಿ ಎ.ಹೆಚ್.ಶಿವಮೂರ್ತಿಸ್ವಾಮಿ, ಸಹ ಕಾರ್ಯದರ್ಶಿ ಜೆ.ಎನ್.ಕರಿಬಸಪ್ಪ, ಸದಸ್ಯರಾದ ಬಸವನಗೌಡ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published.