ಪಲ್ಸ್ ಪೋಲಿಯೋಗೆ ಎಸ್ಸೆಸ್ ಚಾಲನೆ

ಪಲ್ಸ್ ಪೋಲಿಯೋಗೆ ಎಸ್ಸೆಸ್ ಚಾಲನೆ

ದಾವಣಗೆರೆ, ಜ.31- ನಗರದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ  ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರು ಇಂದು ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು 5 ವರ್ಷದೊಳಗಿನ ಪ್ರತಿಯೊಬ್ಬ ಮಕ್ಕಳಿಗೂ ಪಲ್ಸ್ ಪೋಲಿಯೋ ಹನಿ ಹಾಕಿಸುವ ಮೂಲಕ ಶಾಶ್ವತ ಅಂಗವೈಕಲ್ಯತೆಯನ್ನು ತಡೆಗಟ್ಟಲು ಸರ್ಕಾರ ದೊಂದಿಗೆ ಕೈ ಜೋಡಿಸಬೇಕು ಎಂದು ಪೋಷಕರಿಗೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ಜಿ.ಎಸ್.ಮಂಜುನಾಥ್ ಗಡಿಗುಡಾಳ್, ವಿನಾಯಕ, ಉಮೇಶ್ ಮತ್ತಿತರರು ಹಾಜರಿದ್ದರು.