ಜಗಜೀವನ್ ರಾಮ್‌ ಜಯಂತಿ ಆಚರಣೆ

ಜಗಜೀವನ್ ರಾಮ್‌ ಜಯಂತಿ ಆಚರಣೆ

ದಾವಣಗೆರೆ, ಏ.7- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಮಹಾನಗರಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಸೋಮವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಡಾ. ಬಾಬು ಜಗಜೀವನ್ ರಾಮ್‌ ಅವರ 114ನೇ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸರಳವಾಗಿ ಆಚರಿಸಲಾಯಿತು.

ಜಿಲ್ಲಾಧಿಕಾರಿ ಮಹಾಂತೇಶ್‌ ಬೀಳಗಿ, ಜಿ.ಪಂ ಉಪಾಧ್ಯಕ್ಷೆ ಸಾಕಮ್ಮ ಗಂಗಾಧರನಾಯ್ಕ, ಸದಸ್ಯ ಬಸವರಾಜಪ್ಪ, ಎಡಿಸಿ ವೀರಮಲ್ಲಪ್ಪ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ ಚಿಂತಾಲ್, ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕಿ ಕೌಸರ್ ರೇಷ್ಮಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರ್ದೇಶಕ ವಿಜಯ ಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಎಸ್.ಆರ್.ಗಂಗಪ್ಪ, ಅಲ್ಪಸಂಖ್ಯಾತರ ಇಲಾಖೆಯ ಅಧಿಕಾರಿ ಅಮಿತ್ ಬಿದರಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಲಕ್ಷ್ಮೀಕಾಂತ್ ಬೊಮ್ಮನ್ನರ್, ಡಿಎಸ್‍ಎಸ್ ಜಿಲ್ಲಾ ಸಂಚಾಲಕ ಕುಂದವಾಡ ಮಂಜುನಾಥ, ಡಿಎಸ್‍ಎಸ್ ಸದಸ್ಯ ಬಿ. ದುಗ್ಗಪ್ಪ, ಹುಲಿಗೇಶ್, ಸೋಮ್ಲಾಪುರದ ಹನುಮಂತಪ್ಪ, ಸಮಾಜದ ಇತರೆ ಮುಖಂಡರು, ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.

Leave a Reply

Your email address will not be published.