3.45 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳು ಲೋಕಾರ್ಪಣೆ

3.45 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳು ಲೋಕಾರ್ಪಣೆ

ದಾವಣಗೆರೆ, ಏ.7- ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಸಬೆಳವನೂರು, ತುರ್ಚಘಟ್ಟ, ಚಂದ್ರನಹಳ್ಳಿ ಹಾಗೂ ಹೊಸಬಿಸಲೇರಿ ಗ್ರಾಮಗಳಲ್ಲಿ ವಿವಿಧ ಇಲಾಖೆಗಳ ಸಹಕಾರದೊಂದಿಗೆ ನಿರ್ಮಿಸಿರುವ 3.45 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಲೋಕಾರ್ಪಣೆಗೊಳಿಸಿದರು.

ಹೊಸಬೆಳವನೂರು ಗ್ರಾಮದ 12 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಿರುವ ಡಾ|| ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ, 35 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಪಶು ಸಂಗೋಪನಾ ಆಸ್ಪತ್ರೆ, 12 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸೇವಾಲಾಲ್ ಸಮುದಾಯ ಭವನ ಹಾಗೂ 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಎಪಿಎಂಸಿ ಗೋಡೌನ್, ತುರ್ಚಘಟ್ಟ ಗ್ರಾಮದಲ್ಲಿ 24 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಡಿಜಿಟಲ್ ಲೈಬ್ರರಿ ಮತ್ತು ವ್ಯಾಯಾಮ ಶಾಲೆ, 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಶ್ರೀ ಬಾಣದ ರಂಗನಾಥ ಸ್ವಾಮಿ, 31.50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಹೈಸ್ಕೂಲ್ ಕೊಠಡಿ, 1ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಎಪಿಎಂಸಿ ಗೋಡೌನ್, ಚಂದ್ರನಹಳ್ಳಿಯಲ್ಲಿ 24 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿ ಹಾಗೂ ಹೊಸಬಿಸಲೇರಿ ಗ್ರಾಮದಲ್ಲಿ 21.20 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಗಳನ್ನು ಸಾರ್ವಜನಿಕರಿಗೆ ಸಮರ್ಪಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎಸ್ಸೆಸ್,  ದಕ್ಷಿಣ ವಿಧಾನಸಭಾ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿತ್ತು. ಇಂದು ಈ ಕಾಮಗಾರಿಗಳನ್ನು ಸಾರ್ವಜನಿಕರಿಗೆ ಸಮರ್ಪಿಸಲಾಗಿದ್ದು, ಇನ್ನಷ್ಟು ಅಭಿವೃದ್ಧಿ ಕೆಲಸಗಳು ನಡೆಯುತ್ತಿದ್ದು,
ಅವುಗಳನ್ನು ಶೀಘ್ರ ಲೋಕಾರ್ಪಣೆಗೊಳಿಸಲಾಗುವುದು. ಸಾರ್ವಜನಿಕರು ಈ ಗೋದಾಮು, ಶಾಲಾ ಕೊಠಡಿ ಹಾಗೂ ಭವನಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದರು.

ಈ ಸಂದರ್ಭದಲ್ಲಿ  ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶ್ರೀಮತಿ ಸಾಕಮ್ಮ ಗಂಗಾಧರನಾಯ್ಕ, ಸದಸ್ಯರಾದ ಜಿಲ್ಲಾ ಪಂಚಾಯಿತಿ ಸದಸ್ಯ ಜಿ.ಸಿ.ನಿಂಗಪ್ಪ, ಎಪಿಎಂಸಿ ಅಧ್ಯಕ್ಷ ಎಸ್.ಕೆ. ಚಂದ್ರಶೇಖರ್, ಉಪಾಧ್ಯಕ್ಷ ಬಿಸಲೇರಿ ಈರಣ್ಣ, ಸದಸ್ಯ ದೊಗ್ಗಳ್ಳಿ ಬಸವರಾಜ್, ತಾ.ಪಂ.ಸದಸ್ಯ ಮಂಜಪ್ಪ, ಮೀನಾ ಶ್ರೀನಿವಾಸ್, ಜಿ.ಪಂ. ಮಾಜಿ ಅಧ್ಯಕ್ಷ ತುರ್ಚಘಟ್ಟದ ಬಸವರಾಜಪ್ಪ, ಬೆಳವನೂರು ಗ್ರಾ.ಪಂ. ಅಧ್ಯಕ್ಷ ಎಸ್.ಕೆ.ಮಾಲತೇಶ್, ಉಪಾಧ್ಯಕ್ಷೆ ಶೃತಿ ನಾಗರಾಜ್, ಗ್ರಾ.ಪಂ. ಸದಸ್ಯರಾದ ಎಂ.ಪಿ. ನವೀನ್ ಕುಮಾರ್, ಮುಖಂಡರುಗಳಾದ ತೆಂಗಿನಮರದ ಬಸವರಾಜಪ್ಪ, ಹನುಮಜ್ಜ, ಸತೀಶ್, ಕರಿಬಸಪ್ಪ, ರಿಯಾಜ್ ಅಹ್ಮದ್, ಅನ್ವರ್, ಬಸವನಗೌಡ್ರು, ಪಿಡಿಓಗಳಾದ ಲಕ್ಷ್ಮಿದೇವಿ ಮಂಜುನಾಥ್, ವಿವಿಧ ಇಲಾಖೆಯ ಅಧಿಕಾರಿಗಳಾದ ಮಲ್ಲಿಕಾರ್ಜುನಪ್ಪ, ಮಹಾದೇವಪ್ಪ, ಪ್ರಸಾದ್ ಪಿ., ಪ್ರಕಾಶ್ ನಾಯ್ಕ, ರವಿ, ಶಿವಕುಮಾರ್, ಪರಮೇಶ್ವರಪ್ಪ, ವೆಂಕಟೇಶ್, ವಿವಿಧ ಸರ್ಕಾರಿ ಶಾಲೆಗಳ ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು. 

Leave a Reply

Your email address will not be published.