ಪಂಚಾಯ್ತಿ ಚುನಾವಣೆಗೆ ಸಿದ್ಧರಾಗುವಂತೆ ಕಾರ್ಯಕರ್ತರಿಗೆ ಶಾಸಕ ರಾಮಚಂದ್ರ ಕರೆ

ಪಂಚಾಯ್ತಿ ಚುನಾವಣೆಗೆ ಸಿದ್ಧರಾಗುವಂತೆ ಕಾರ್ಯಕರ್ತರಿಗೆ ಶಾಸಕ ರಾಮಚಂದ್ರ ಕರೆ

ಜಗಳೂರು, ಜು.15- ಮುಂಬರುವ ತಾಲ್ಲೂಕು ಪಂ ಚಾಯ್ತಿ ಮತ್ತು ಜಿಲ್ಲಾ ಪಂಚಾಯ್ತಿ ಚುನಾವಣೆಗಳಲ್ಲಿ ಬಿಜೆಪಿಯನ್ನು ಬಹುಮತಕ್ಕೆ ತಂದುಕೊಡುವ ನಿಟ್ಟಿನಲ್ಲಿ ಕಾರ್ಯಕರ್ತರು ತಕ್ಷಣದಿಂದಲೇ ಸಂಘಟನೆಗೆ ಸನ್ನದ್ಧರಾಗಬೇಕು ಎಂದು ಶಾಸಕ ಎಸ್.ವಿ.ರಾಮಚಂದ್ರ ಅವರು ಬಿಜೆಪಿ ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.

ಪಟ್ಟಣದ ಶ್ರೀ ಮಹರ್ಷಿ ವಾಲ್ಮೀಕಿ ಸಮುದಾಯ ಭವನದಲ್ಲಿ ಇಂದು ಏರ್ಪಾಡಾಗಿದ್ದ ವಿಧಾನ ಸಭಾ ಕ್ಷೇತ್ರದ ಪಕ್ಷದ ಮಂಡಲ ಕಾರ್ಯಕಾರಿಣಿ ಸಭೆ ಹಾಗೂ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರ್ಕಾರಗಳು ಎಲ್ಲಾ ವರ್ಗದ ಜನರಿಗೆ ಅನೇಕ ಸೌಲಭ್ಯಗಳನ್ನು ಕಲ್ಪಿಸಿರುವ ಕುರಿತಂತೆ ವಿವರಿಸಿದ ಶಾಸಕರು, ಬರುವ ಪಂಚಾಯ್ತಿ ಚುನಾವಣೆಗಳಲ್ಲಿ ಬಿಜೆಪಿ ಬಹುಮತ ಗಳಿಸುವ ವಿಶ್ವಾಸ ವ್ಯಕ್ತಪಡಿಸಿದರು. ಈ ಯೋಜನೆಗಳ ಕುರಿತಂತೆ ಮನೆ-ಮನೆಗೂ ತೆರಳಿ ಮಾಹಿತಿ ನೀಡುವುದರ ಮೂಲಕ ಆ ಯೋಜನೆಗಳ ಸದುಪಯೋಗವನ್ನು ಜನರು ಪಡೆದುಕೊಳ್ಳಲು ಕಾರ್ಯಕರ್ತರು ಸಹಕಾರ ನೀಡಬೇಕು ಎಂದು ಕರೆ ನೀಡಿದರು.

ಜಗಳೂರು ಕ್ಷೇತ್ರವಲ್ಲದೇ, ಜಿಲ್ಲೆಯ ಬಹು ತೇಕ ಎಲ್ಲಾ ಕ್ಷೇತ್ರಗಳಲ್ಲೂ ಈಗಾಗಲೇ ಬಿಜೆಪಿ ಕ್ರಿಯಾಶೀಲವಾಗಿದ್ದು, ಇದರಿಂದಾಗಿ ಹಲವು ಪಂಚಾಯ್ತಿಗಳಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರಗಳು ಜಾರಿಗೆ ತಂದಿರುವ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲಾ ಪಂಚಾಯ್ತಿಗಳಲ್ಲೂ ಬಿಜೆಪಿಯನ್ನು ಅಧಿಕಾರಕ್ಕೆ ತರುವ ದಿಸೆಯಲ್ಲಿ ಕೆಲಸ ಮಾಡಬೇಕು ಎಂದು ಶಾಸಕ ರಾಮಚಂದ್ರ ಅವರು ಕಾರ್ಯಕರ್ತರಿಗೆ ತಿಳಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಹನಗವಾಡಿ ವೀರೇಶ್, ಜಗಳೂರು ತಾಲ್ಲೂಕು ಬಿಜೆಪಿ ಅಧ್ಯಕ್ಷ ಪಲ್ಲಾಗಟ್ಟೆ ಹೆಚ್.ಸಿ.ಮಹೇಶ್, ಜಿಲ್ಲಾ ಬಿಜೆಪಿ ಪಕ್ಷದ ಪ್ರಧಾನ ಕಾರ್ಯದರ್ಶಿ ಬಿ.ಎಸ್.ಜಗದೀಶ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ ಮತ್ತಿತರರು ಸಭೆಯನ್ನುದ್ದೇಶಿಸಿ ಮಾತನಾಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೊಕ್ಕೆ ನಾಗರಾಜ್, ಪಟ್ಟಣ ಪಂಚಾಯ್ತಿ ಅಧ್ಯಕ್ಷ
ಆರ್.ತಿಪ್ಪೇಸ್ವಾಮಿ ಸೇರಿದಂತೆ ವಿಧಾನ ಸಭಾ ಕ್ಷೇತ್ರದ 7 ಪಂಚಾಯ್ತಿಗಳ ಮುಖಂಡರುಗಳಾದ ಬೇವಿನಹಳ್ಳಿ ಕೆಂಚನಗೌಡ್ರು, ಅರಸೀಕೆರೆ ವಿಶ್ವನಾಥಯ್ಯ, ಆನಂದಪ್ಪ, ಉಚ್ಚಂಗಿದುರ್ಗ ಎಸ್.ಹನುಮಂ ತಪ್ಪ, ತೌಡೂರು ಮಂಜಯ್ಯ ಮತ್ತಿತರರು ಸಮಾರಂಭದ ವೇದಿಕೆಯಲ್ಲಿ ಉಪಸ್ಥಿತರಿದ್ದರು.  

ಕಾರ್ಯಕ್ರಮದ ಆರಂಭದಲ್ಲಿ ಕೊರೊ ನಾದಿಂದ ಸಾವಿಗೀಡಾದವರಿಗೆ ಮೌನಚರಣೆ ಮಾಡುವ ಮೂಲಕ ಸಂತಾಪ ಸೂಚಿಸಲಾಯಿತು.