ನಿಧಾನ ಗತಿಯಲ್ಲಿ ಸ್ಮಾರ್ಟ್‌ ಸಿಟಿ ಕಾಮಗಾರಿ

ದಾವಣಗೆರೆ, ಆ.3- ಮಹಾನಗರ ಪಾಲಿಕೆಯ 15, 22, 44 ನೇ ವಾರ್ಡುಗಳಿಗೆ ಸಂಬಂಧಿಸಿದ ವರ್ತುಲ ರಸ್ತೆಯಲ್ಲಿ ಸ್ಮಾರ್ಟ್‌ ಸಿಟಿ ವತಿಯಿಂದ  ಆರಂಭಿಸಿರುವ ಸಿಮೆಂಟ್‌ ರಸ್ತೆ ಕಾಮಗಾರಿಯು ಕಳೆದ 1 ವರ್ಷದಿಂದ ನಿಧಾನವಾಗಿ ಆಮೆಗತಿಯಲ್ಲಿ ನಡೆಯುತ್ತಿರುವ ಬಗ್ಗೆ ಎಂದು ನಗರ ಪಾಲಿಕೆ ಸದಸ್ಯರಾದ ಶ್ರೀಮತಿ ಆಶಾ ಉಮೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಮಾರ್ಟ್ ಸಿಟಿ ಅಧಿಕಾರಿಗಳ ಬೇಜವಾಬ್ದಾರಿತನದಿಂದಾಗಿ ಸಾರ್ವಜನಿಕರು ಮತ್ತು ಈ ಭಾಗದ ಸಣ್ಣ – ಪುಟ್ಟ ವ್ಯಾಪಾರ ಸ್ಥರಿಗೆ ತೊಂದರೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಬಗ್ಗೆ ಸಂಬಂಧಪಟ್ಟ ಗುತ್ತಿಗೆದಾರರಿಗೆ ಕೇಳಿದರೆ ಬೇಜವಾಬ್ದಾರಿ ಉತ್ತರ ನೀಡುತ್ತಿದ್ದು, ಈ ರಸ್ತೆ ಕಾಮಗಾರಿ ಮತ್ತು ಪಕ್ಕ ಪೇವರ್‌ ಕಾಮಗಾರಿಯನ್ನು ತಕ್ಷಣವೇ ಪೂರ್ಣಗೊಳಿಸಬೇಕೆಂದು ಅವರು ಸ್ಮಾರ್ಟ್‌ ಸಿಟಿ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.