ಕನಕ‌ದಾಸರ ಮೌಲ್ಯಗಳು ಸಮಾಜಕ್ಕೆ ಮಾದರಿ

ಕನಕ‌ದಾಸರ ಮೌಲ್ಯಗಳು ಸಮಾಜಕ್ಕೆ ಮಾದರಿ

ಜಗಳೂರಿನ ಕಾರ್ಯಕ್ರಮದಲ್ಲಿ ಶಾಸಕ ರಾಮಚಂದ್ರ

ಜಗಳೂರು, ನ.22- ಕೀರ್ತನೆಗಳ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸಿದ ಕನಕದಾಸರ ಆದರ್ಶ ಮೌಲ್ಯಗಳು ಸಮಾಜಕ್ಕೆ ಮಾದರಿಯಾಗಿವೆ ಎಂದು ಶಾಸಕ ಎಸ್.ವಿ.ರಾಮಚಂದ್ರ ಹೇಳಿದರು.

ಪಟ್ಟಣದ ತಾಲ್ಲೂಕು ಕಛೇರಿ ಆವರಣದಲ್ಲಿ ಕನಕ ಜಯಂತಿ ಅಂಗವಾಗಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಅವರು, ಜಾತೀಯತೆ, ಅಸಮಾನತೆ, ಅಂಧಕಾರ ಹೋಗಲಾಡಿಸಲು ಶ್ರಮಿಸಿದ ಕನಕದಾಸರನ್ನು ಪ್ರತಿಯೊಬ್ಬರೂ ಸ್ಮರಿಸಬೇಕು ಎಂದರು.

ಕೋವಿಡ್ ಹಿನ್ನೆಲೆಯಲ್ಲಿ ಮಹನೀಯರ ಜಯಂತಿಗಳನ್ನು ಸರಳವಾಗಿ ಆಚರಿಸಲಾಗುತ್ತಿದ್ದು,  ಮುಂದಿನ ದಿನಗಳಲ್ಲಿ ಕೊರೊನಾ ಮುಕ್ತವಾಗಿ, ಉತ್ತಮ ಮಳೆ-ಬೆಳೆಯಾಗಿ ರೈತರು ಸಮೃದ್ದಿ ಜೀವನ ಸಾಗಿಸುವಂತಾದರೆ, ಆಯಾ ಸಮುದಾಯಗಳ ಸಹಯೋಗದಲ್ಲಿ  ಅದ್ಧೂರಿಯಾಗಿ ಆಚರಿಸಲಾಗುವುದು ಎಂದರು. 

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಎಚ್.ಸಿ.ಮಹೇಶ್, ಪ.ಪಂ. ಅಧ್ಯಕ್ಷ ಎಸ್. ಸಿದ್ದಪ್ಪ, ಪ.ಪಂ ಮಾಜಿ ಅಧ್ಯಕ್ಷ ಆರ್.ತಿಪ್ಪೇಸ್ವಾಮಿ, ಉಪಾಧ್ಯಕ್ಷೆ ಮಂಜಮ್ಮ, ಕಾಂಗ್ರೆಸ್ ಮುಖಂಡರಾದ ಚಿಕ್ಕಮ್ಮನಹಟ್ಟಿ ದೇವೇಂದ್ರಪ್ಪ, ಜೆ.ಎನ್.ಶಿವನಗೌಡ, ಓಮಣ್ಣ, ವೆಂಕಟೇಶ್, ತಹಶೀಲ್ದಾರ್ ಸಂಜನಾ ಇತರರು ಭಾಗವಹಿಸಿದ್ದರು.

Leave a Reply

Your email address will not be published.