ಪರಿಷತ್ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಸೋಮಶೇಖರ್ ನಾಮಪತ್ರ ಸಲ್ಲಿಕೆ

ಪರಿಷತ್ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಸೋಮಶೇಖರ್ ನಾಮಪತ್ರ ಸಲ್ಲಿಕೆ

ದಾವಣಗೆರೆ,ನ.23- ಚಿತ್ರದುರ್ಗ – ದಾವಣಗೆರೆ ಜಿಲ್ಲೆಗಳನ್ನೊಳಗೊಂಡ ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಬಿ. ಸೋಮಶೇಖರ್ ಅವರು ಚಿತ್ರದುರ್ಗದಲ್ಲಿ ಇಂದು ಏರ್ಪಾಡಾಗಿದ್ದ ಬೃಹತ್ ಮೆರವಣಿಗೆ  ಮೂಲಕ ಚುನಾವಣಾಧಿಕಾರಿಗಳಿಗೆ ತಮ್ಮ ಉಮೇದುವಾರಿಕೆ ಅರ್ಜಿ ಸಲ್ಲಿಸಿದರು.

ಮಾಜಿ ಸಚಿವ ಹೆಚ್. ಆಂಜನೇಯ, ಶಾಸಕರುಗಳಾದ ಹರಿಹರದ ಎಸ್. ರಾಮಪ್ಪ, ಚಳ್ಳಕೆರೆಯ ರಘು ಮೂರ್ತಿ, ಹೊಳಲ್ಕೆರೆಯ ಗೋವಿಂದಪ್ಪ, ವಿಧಾನ ಪರಿಷತ್ ಸದಸ್ಯ ರಘು ಆಚಾರ್ ಇನ್ನಿತರರು ಮೆರವಣಿಗೆಯ ಮುಖಂಡತ್ವ ವಹಿಸಿದ್ದರು.

ದಾವಣಗೆರೆ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಎ.ನಾಗರಾಜ್ ನೇತೃತ್ವದಲ್ಲಿ ಪಾಲಿಕೆ ಸದಸ್ಯರುಗಳಾದ ಗಡಿಗುಡಾಳ್ ಮಂಜುನಾಥ್, ಶ್ರೀಮತಿ ಸವಿತಾ ಗಣೇಶ್ ಹುಲ್ಲುಮನೆ, ಶ್ರೀಮತಿ ಆಶಾ ಉಮೇಶ್, ಶ್ರೀಮತಿ ಶಿವಲೀಲಾ ಕೊಟ್ರಯ್ಯ, ಶ್ರೀಮತಿ ಸುಧಾ ಇಟ್ಟಿ ಗುಡಿ ಮಂಜುನಾಥ್, ಅಬ್ದುಲ್ ಲತೀಫ್, ಪಾಮೇನಹಳ್ಳಿ ನಾಗರಾಜ್ ಅವರುಗಳಲ್ಲದೇ, ಕಾಂಗ್ರೆಸ್ ಮುಖಂಡರು ಗಳಾದ ಕೆ.ಜಿ.ಶಿವಕುಮಾರ್,  ಎಸ್. ಮಲ್ಲಿಕಾರ್ಜುನ್, ಗಣೇಶ್ ಹುಲ್ಲುಮನೆ, ಇಟ್ಟಿಗುಡಿ ಮಂಜುನಾಥ್, ಜಗ ದೀಶ್ ಮತ್ತಿತರರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published.