ನಗರದಲ್ಲಿ ರಾಜ್ಯೋತ್ಸವ ಮೆರವಣಿಗೆ ಸಂಭ್ರಮ

ನಗರದಲ್ಲಿ ರಾಜ್ಯೋತ್ಸವ ಮೆರವಣಿಗೆ ಸಂಭ್ರಮ

ದಾವಣಗೆರೆ, ಡಿ.28- ಕನ್ನಡ ರಾಜ್ಯೋತ್ಸವದ ಅಂಗವಾಗಿ ಇಂದು ಬೆಳಿಗ್ಗೆ ಕನ್ನಡ ತಾಯಿ ಭುವನೇಶ್ವರಿ ತಾಯಿಯ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು.

ಪಾಲಿಕೆ ಆವರಣದಲ್ಲಿ ಶಿಕ್ಷಣ ತಜ್ಞ ಕೆ. ಇಮಾಂ ಸಾಬ್ ಅವರು ತಾಯಿ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಿದರು. ನಂತರ ತಮಟೆ ಭಾರಿಸುವುದರ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.

ಮೆರವಣಿಗೆಯಲ್ಲಿ ಕೀಲು ಕುದುರೆ, ಡೊಳ್ಳು ಕುಣಿತ, ಸಾಗರದ ಹೆಣ್ಣು ಮಕ್ಕಳ ಡೊಳ್ಳು ಕುಣಿತ, ಕರಡಿ ಮಜಲು, ವೀರಗಾಸೆ, ಕಹಳೆ, ಉಜರೆ ಮತ್ತು ಚನ್ನರಾಯಪಟ್ಟಣಗಳಿಂದ ಬೊಂಬೆಗಳ ಪ್ರದರ್ಶನ ಸೇರಿದಂತೆ ಜಾನಪದ ಕಲಾ ಪ್ರಕಾರಗಳು ಮೆರವಣಿಗೆಗೆ ಇಂಬು ನೀಡಿದವು.

ಪಾಲಿಕೆಯಿಂದ ಹೊರಟ ಮೆರವಣಿಗೆಯು ರಾಜಬೀದಿಗಳಲ್ಲಿ ಸಂಚರಿಸಿತು. ಶಿಕ್ಷಣ ತಜ್ಞ ಕೆ. ಇಮಾಂ ಅವರು ಮೆರವಣಿಗೆಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮೇಯರ್ ಎಸ್.ಟಿ. ವೀರೇಶ್, ಆಯುಕ್ತ ವಿಶ್ವನಾಥ ಪಿ. ಮುದಜ್ಜಿ, ಉಪಮೇಯರ್ ಶಿಲ್ಪಾ ಜಯಪ್ರಕಾಶ್, ಸ್ಥಾಯಿ ಸಮಿತಿ ಅಧ್ಯಕ್ಷರುಗಳಾದ ಎಲ್.ಡಿ. ಗೋಣೆಪ್ಪ, ಉಮಾ ಪ್ರಕಾಶ್, ರೇಣುಕಾ ಶ್ರೀನಿವಾಸ್  ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.