ರಾಜ್ಯ ಬ್ಯಾಂಕ್ ಎಂಪ್ಲಾಯೀಸ್ ಫೆಡರೇಷನ್‌ಗೆ ರಾಘವೇಂದ್ರ ನಾಯರಿ ಜಂಟಿ ಕಾರ್ಯದರ್ಶಿ

ದಾವಣಗೆರೆ, ಜ.13- ಕರ್ನಾಟಕ ಪ್ರದೇಶ ಬ್ಯಾಂಕ್ ಎಂಪ್ಲಾಯೀಸ್ ಫೆಡರೇಷನ್‍ ಜಂಟಿ ಕಾರ್ಯದರ್ಶಿಯಾಗಿ ನಗರದ ಕೆ.ರಾಘವೇಂದ್ರ ನಾಯರಿ ನೇಮಕಗೊಂಡಿದ್ದಾರೆ.

ಬೆಂಗಳೂರಿನಲ್ಲಿ ಈಚೆಗೆ ನಡೆದ ಒಕ್ಕೂಟದ ಕೇಂದ್ರ ಸಮಿತಿ ಸಭೆಯಲ್ಲಿ ಈ ನೇಮಕ ನಡೆ ಯಿತು ಎಂದು ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷ ಬಿ.ಆನಂದಮೂರ್ತಿ ತಿಳಿಸಿದ್ದಾರೆ.  ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ರಾಜ್ಯ ಸಮಿತಿಯಾದ ಕರ್ನಾ ಟಕ ಪ್ರದೇಶ ಬ್ಯಾಂಕ್ ನೌಕರರ ಒಕ್ಕೂ ಟವು ರಾಜ್ಯದ ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳು, ಗ್ರಾಮೀಣ ಬ್ಯಾಂಕುಗಳು ಹಾಗೂ ಖಾಸಗಿ ಬ್ಯಾಂಕುಗಳಲ್ಲಿರುವ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ಸಂಯೋಜಿತ ಸಂಘಗಳ ಒಕ್ಕೂಟವಾಗಿದೆ. ದಾವಣಗೆರೆ ಜಿಲ್ಲೆಗೆ ಪ್ರಪ್ರಥಮ ಬಾರಿಗೆ ಈ ಹುದ್ದೆ ದೊರೆತಿದೆ ಎಂದು ಅವರು ಹೇಳಿದ್ದಾರೆ.

Leave a Reply

Your email address will not be published.