ಖಾಲಿ ಇರುವ ಸಹಾಯಕ ನಿರ್ದೇಶಕರ ಹುದ್ದೆಗಳಿಗೆ ಬಡ್ತಿಗಾಗಿ ಆಗ್ರಹ

ಖಾಲಿ ಇರುವ ಸಹಾಯಕ ನಿರ್ದೇಶಕರ ಹುದ್ದೆಗಳಿಗೆ ಬಡ್ತಿಗಾಗಿ ಆಗ್ರಹ

ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ ಮನವಿ

ದಾವಣಗೆರೆ, ಮೇ 26- ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಹುದ್ದೆಯಿಂದ ಖಾಲಿ ಇರುವ ಸಹಾಯಕ ನಿರ್ದೇಶಕರ ಹುದ್ದೆಗಳಿಗೆ ಬಡ್ತಿ ನೀಡಲು ಕ್ರಮವಹಿಸಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಕರ್ನಾಟಕ ರಾಜ್ಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ ಮುಖೇನ ಮುಖ್ಯಮಂತ್ರಿಗಳಿಗೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮನವಿ ಸಲ್ಲಿಸಿದರು.

2006-07 ರಿಂದ 2011-12ರ ವರೆಗೆ ಮನರೇಗಾ ಯೋಜನೆಯಲ್ಲಿ ಅನುಷ್ಠಾನಗೊಂಡ ಕಾಮಗಾರಿಗಳನ್ನು ತನಿಖೆ ಮಾಡಲು ಲೋಕಾಯುಕ್ತಕ್ಕೆ ವಹಿಸಿರುವ ಪ್ರಕರಣವನ್ನು ವಾಪಸ್ ಪಡೆಯಬೇಕು, 8 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆಯನ್ನು ಗ್ರೂಪ್ ಬಿಗೆ ಮೇಲ್ದರ್ಜೆಗೆರಿಸಬೇಕು. ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಮತ್ತು ನೌಕರರನ್ನು ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡುವ ನಿಯಮವನ್ನು ಕೂಡಲೇ ಜಾರಿಗೊಳಿಸಬೇಕೆಂಬುದು ಸೇರಿ 15 ಬೇಡಿಕೆಗಳ ಈಡೇರಿಕೆಗೆ ಸಂಘದ ಅಧ್ಯಕ್ಷ ಡಿ. ಶಿವಕುಮಾರ್ ಅಸಮಾಧಾನ ಆಗ್ರಹಿಸಿದರು.

 ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಾದ ಐ.ಬಿ. ಸುರೇಖಾ, ಪರಮೇಶ್ ಕೊಲ್ಲೂರು, ಶರಣಪ್ಪ ಮಲವನಶೆಟ್ಟಿ, ತಿಪ್ಪೇಸ್ವಾಮಿ, ಅಭಿಜಿತ್, ನಾಗರಾಜ್, ಉಮೇಶ್, ರೇಣುಕಾ ಪ್ರಸಾದ್, ಎಂ.ವಿ. ರವಿ, ಶಿರಿನ್‌ತಾಜ್, ಸವಿತ ಬಾಯಿ, ಮರುಳಸಿದ್ದಪ್ಪ, ಲೋಹಿತ್, ಯೋಗೇಶ್ ಇತರರು ಇದ್ದರು.