ಶ್ರೀಧರ್ ಪಾಟೀಲ್ ಅಭಿಮಾನಿ ಬಳಗದಿಂದ ಅಂಬೇಡ್ಕರ್ ಪುತ್ಥಳಿ ನಿರ್ಮಾಣ

ಶ್ರೀಧರ್ ಪಾಟೀಲ್ ಅಭಿಮಾನಿ ಬಳಗದಿಂದ ಅಂಬೇಡ್ಕರ್ ಪುತ್ಥಳಿ ನಿರ್ಮಾಣ

ದಾವಣಗೆರೆ, ಮೇ 26- ಶ್ರೀಧರ್ ಪಾಟೀಲ್ ಅಭಿಮಾನಿ ಬಳಗದಿಂದ ಕೈಗೊಂಡಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿ ನಿರ್ಮಾಣಕ್ಕೆ ಇಂದು ಗುದ್ದಲಿ ಪೂಜೆ ನೆರವೇರಿಸುವ ಮುಖೇನ ಚಾಲನೆ ನೀಡಲಾಯಿತು.

ನಗರಕ್ಕೆ ಸಮೀಪದ ಶಿರಮಗೊಂಡನಹಳ್ಳಿ ಗ್ರಾಮದ ಎ.ಕೆ. ಕಾಲೋನಿಯಲ್ಲಿನ ಶ್ರೀಧರ್ ಪಾಟೀಲ್ ಕಚೇರಿ ಮುಂಭಾಗದಲ್ಲಿ ಶ್ರೀಧರ್ ಪಾಟೀಲ್ ಅವರ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ಸೇರಿದಂತೆ, ಅತಿಥಿ ಗಣ್ಯರು ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು. ಅಲ್ಲದೇ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಪ್ರತಿ ಹಳ್ಳಿಗಳಲ್ಲೂ ಅಂಬೇಡ್ಕರ್ ಅವರ ಪುತ್ಥಳಿ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು. ಬಹಿರಂಗ ಸಭೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯ ಸಂಚಾಲಕ ವಿಜಯ್ ಶರ್ಮಾ, ಜಿಲ್ಲಾ ಉಸ್ತುವಾರಿ ಅರುಣ್‌ಕುಮಾರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶ್ರೀಧರ್ ಪಾಟೀಲ್, ಆವರಗೆರೆ ರಂಗಪ್ಪ, ವಿಜಯಶಾಸ್ತ್ರಿ ಮಠ್, ಶ್ರೀಧರ್ ಪಾಟೀಲ್ ಅಭಿಮಾನಿ ಬಳಗದ ಗೌರವಾಧ್ಯಕ್ಷ ಆದಿಲ್ ಖಾನ್ ಸೇರಿದಂತೆ, ಆಮ್ ಆದ್ಮಿ ಪಕ್ಷದ ಮುಖಂಡರು, ಕಾರ್ಯಕರ್ತರು, ಶ್ರೀಧರ್ ಪಾಟೀಲ್ ಅಭಿಮಾನಿ ಬಳಗದವರು ಇದ್ದರು.