ಮಲೇಬೆನ್ನೂರು : ಕೊಮಾರನಹಳ್ಳಿಯ ಹೆಳವನಕಟ್ಟೆ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿಯ ಕೆರೆ ಅಂಗಳದಲ್ಲಿ ನಾಗರಪಂಚಮಿ ಅಂಗವಾಗಿ ಜರುಗುತ್ತಿದ್ದ ಕಾರಣಿಕ ಜಾತ್ರೆಯನ್ನು ಕೊರೊನಾ ವೈರಸ್ ಹಿನ್ನೆಲೆಯಲ್ಲಿ ರದ್ದು ಪಡಿಸಲಾಗಿದೆ ಎಂದು ಉಪ ತಹಶೀಲ್ದಾರ್ ರವಿ ತಿಳಿಸಿದ್ದಾರೆ.
Category: ಸುದ್ದಿ ವೈವಿಧ್ಯ
ಕೊರೊನಾ ನಿರ್ವಹಣೆಯಲ್ಲಿ ಅವ್ಯವಹಾರ
ಕೊರೊನಾ ಚಿಕಿತ್ಸಾ ಸಲಕರಣೆಗಳ ಖರೀದಿಯಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿದೆ ಎಂಬ ವಿರೋಧ ಪಕ್ಷದ ನಾಯಕರ ಆರೋಪದ ಹಿನ್ನೆಲೆಯಲ್ಲಿ ಈ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ರಾಜ್ಯಪಾಲರನ್ನು ಒತ್ತಾಯಿಸಲಾಯಿತು.
ಕೊರೊನಾ ಸೋಂಕಿತರನ್ನು ಅವಮಾನಿಸದೇ ಆತ್ಮ ಸ್ಥೈರ್ಯ ತುಂಬುವ ಕಾರ್ಯವಾಗಲಿ
ಹರಿಹರ : ಸಾರ್ವಜನಿಕರ ಸಹಕಾರ ಮತ್ತು ಸಹಭಾಗಿತ್ವದಿಂದ ಮಾತ್ರ ಕೊರೊನಾ ರೋಗವನ್ನು ಮುಕ್ತ ಮಾಡುವುದಕ್ಕೆ ಸಾಧ್ಯವಿದೆ ಎಂದು ಜಿಲ್ಲಾ ನಗರ ಯೋಜನಾ ಆಯೋಗದ ನಿರ್ದೇಶಕರಾದ ಶ್ರೀಮತಿ ಜಿ. ನಜ್ಮಾ ಅಭಿಪ್ರಾಯಪಟ್ಟರು.
ಮಾಜಿ ಶಾಸಕ ಹೆಚ್.ಪಿ.ಆರ್ ರಿಂದ ಜನತೆಗೆ ದ್ರೋಹ
ಜಗಳೂರು : ತುಂಗಭದ್ರಾ ಜಲಾಶಯ ಹಿನ್ನೀರಿನ ಸುಮಾರು 2250 ಕೋಟಿ ರೂ.ಗಳ ಕುಡಿಯುವ ನೀರಿನ ಯೋಜನೆ ವ್ಯಾಪ್ತಿಗೆ ಜಗಳೂರು ಕ್ಷೇತ್ರವನ್ನು ಸೇರಿಸುವಲ್ಲಿ ವಿಫಲವಾಗಿರುವ ಮಾಜಿ ಶಾಸಕ ಹೆಚ್.ಪಿ. ರಾಜೇಶ್, ಕ್ಷೇತ್ರದ ಜನಕ್ಕೆ ದ್ರೋಹ ಮಾಡಿದ್ದಾರೆ
ಸೈಕಲ್ ಏರಿ ಪ್ರಮುಖ ಬೀದಿಗಳನ್ನು ಸುತ್ತಿ ಲಾಕ್ ಡೌನ್ ಸ್ಥಿತಿ ಪರಿಶೀಲಿಸಿದ ಅಧಿಕಾರಿಗಳು
ಕೋವಿಡ್-19 ಕೊರೊನಾ ವ್ಯಾಪಕ ವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸಂಸದರ ಪ್ರಯತ್ನದಿಂದಾಗಿ ರಷ್ಯಾದಲ್ಲಿ ವೈದ್ಯಕೀಯ ಶಿಕ್ಷಣ ವ್ಯಾಸಂಗ ಮಾಡುತ್ತಿದ್ದ ಕರ್ನಾಟಕದ 110 ವೈದ್ಯಕೀಯ ವಿದ್ಯಾರ್ಥಿಗಳು ವಿಶೇಷ ವಿಮಾನದ ಮೂಲಕ ತಾಯ್ನಾಡಿಗೆ ಮರಳಲಿದ್ದಾರೆ.
ಬಿಕೋ ಅನ್ನುತ್ತಿದ್ದ ರಾಣೇಬೆನ್ನೂರು
ರಾಣೇಬೆನ್ನೂರು : ಕೊರೊನಾ ತಡೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಜಾರಿಗೊಳಿಸಿದ ಭಾನುವಾರದ ಕರ್ಫ್ಯೂಗೆ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಉತ್ತಮ ಸ್ಪಂದನೆ ದೊರೆತಿದೆ.
ಸರ್ಕಾರದ ಆದೇಶ ಪಾಲಿಸಿದ ಹರಿಹರ
ಹರಿಹರ : ರಾಜ್ಯ ಮತ್ತು ಕೇಂದ್ರ ಸರ್ಕಾರ ಕೊರೊನಾ ಹರಡುವುದನ್ನು ನಿಯಂತ್ರಿಸಲು ಘೋಷಣೆ ಮಾಡಿರುವ ಭಾನುವಾರದ ಲಾಕ್ಡೌನ್ಗೆ ನಗರದ ಎಲ್ಲಾ ವ್ಯಾಪಾರಸ್ಥರು ಅಂಗಡಿ ಮುಂಗಟ್ಟುಗಳನ್ನು ಸ್ಥಗಿತಗೊಳಿಸುವ ಮೂಲಕ ಬೆಂಬಲ ನೀಡಿದರು.
ಹೊನ್ನಾಳಿ ತಾಲ್ಲೂಕು ಪೂರ್ಣ ಸ್ತಬ್ಧ
ಹೊನ್ನಾಳಿ : ತಾಲ್ಲೂಕಿನಲ್ಲಿ ಜನತಾ ಕರ್ಫ್ಯೂಗೆ ಸಾರ್ವಜನಿಕರು, ವರ್ತಕರು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ಸೀಲ್ಡೌನ್ ಮಾಡಿರುವ ಹಿನ್ನೆಲೆಯಲ್ಲಿ ಕೆಲವು ಸಾರ್ವಜನಿಕರು ಹೊರಗೆ ಓಡಾಡದೇ ಭಯಭೀತರಾಗಿ ಮನೆಯಲ್ಲಿಯೇ ಇದ್ದಾರೆ.
ವೈದ್ಯ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ: ಹೋರಾಟಕ್ಕೆ ಕರವೇ ಬೆಂಬಲ
ಸ್ಥಳೀಯ ವೈದ್ಯಕೀಯ ಕಾಲೇಜು ಗೃಹ ವೈದ್ಯರು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಶಿಷ್ಯ ವೇತನಕ್ಕಾಗಿ ಹೋರಾಟ ನಡೆಸುತ್ತಿದ್ದು, ಈ ಹೋರಾಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದಿಂದ ಬೆಂಬಲ ನೀಡಿದೆ ಎಂದು ವೇದಿಕೆ ತಿಳಿಸಿದೆ.
ಹೊನ್ನಾಳಿ : ಹಲವು ಬೀದಿಗಳ ಮನೆಗಳು ಸೀಲ್ಡೌನ್
ಹೊನ್ನಾಳಿ : ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಇಂದು ಕೊರೊನಾ ಪೀಡಿತರ ಮನೆಗಳನ್ನು ಸೀಲ್ಡೌನ್ ಮಾಡಲಾಯಿತು.