ಬೀರಲಿಂಗೇಶ್ವರ ಸ್ವಾಮಿಗೆ ಪ್ರಾಣ ಪ್ರತಿಷ್ಠಾಪನೆ

ಬೀರಲಿಂಗೇಶ್ವರ ಸ್ವಾಮಿಗೆ ಪ್ರಾಣ ಪ್ರತಿಷ್ಠಾಪನೆ

ಮಲೇಬೆನ್ನೂರು ಜ.23- ರಾಜನಹಳ್ಳಿಯಲ್ಲಿ ನೂತನವಾಗಿ ನಿರ್ಮಿಸಿರುವ ಹೊರ ಬೀರಪ್ಪನ ದೇವಸ್ಥಾನ ಉದ್ಘಾಟನೆ ಮತ್ತು ಬೀರಲಿಂಗೇಶ್ವರ ಸ್ವಾಮಿಯ ಪ್ರಾಣ ಪ್ರತಿಷ್ಠಾಪನೆ ಸಮಾರಂಭವು ಸೋಮವಾರ ಹತ್ತಾರು ಗ್ರಾಮಗಳ ಬೀರ ದೇವರಗಳ ಹಾಗೂ ವಿವಿಧ ಮಠಾಧೀಶರ ಸಮ್ಮುಖದಲ್ಲಿ ಜರುಗಿತು. 

ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ, ವಾಲ್ಮೀಕಿ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ, ರಟ್ಟಿಹಳ್ಳಿ ಕಬ್ಬಿಣ ಕಂತಿ ಮಠದ ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ, ಹಡಪದ ಹಪ್ಪಣ್ಣ ಮಠದ ಸ್ವಾಮೀಜಿ, ಶಾಸಕ ಎಸ್. ರಾಮಪ್ಪ, ಮಾಜಿ ಶಾಸಕರಾದ ಬಿ.ಪಿ ಹರೀಶ್,  ಹೆಚ್ ಎಸ್ ಶಿವಶಂಕರ್, ಜಿ.ಪಂ. ಮಾಜಿ ಅಧ್ಯಕ್ಷ ಹನಗವಾಡಿ ವೀರೇಶ್, ಜಿ.ಪಂ. ಮಾಜಿ ಸದಸ್ಯ ಎಂ.ನಾಗೇಂದ್ರಪ್ಪ, ಗ್ರಾ.ಪಂ. ಮಾಜಿ ಅಧ್ಯಕ್ಷ ಎಸ್‌.ಜಿ ಪರಮೇಶ್ವರಪ್ಪ, ಗ್ರಾ ಪಂ ಅಧ್ಯಕ್ಷೆ ಚೈತ್ರ ಲಂಕೇಶ್, ಗ್ರಾ.ಪಂ. ಮಾಜಿ ಅಧ್ಯಕ್ಷ ಹಲಸಬಾಳು ಮಹಾಂತೇಶ್, ಮುಖಂಡರಾದ ನಂದಿಗಾವಿ ಶ್ರೀನಿವಾಸ್, ಚಂದ್ರಶೇಖರ್ ಪೂಜಾರ್, ನಿವೃತ್ತ ಪೊಲೀಸ್‌ ಅಧಿಕಾರಿ ಕುಣೆಬೆಳಕೆರೆ ದೇವೇಂದ್ರಪ್ಪ, ಎನ್.ಹುಲುಗೇಶ್, ಕೆ.ಪಿ. ಗಂಗಾಧರ್ ಸೇರಿದಂತೆ  ಇತರರು ಭಾಗವಹಿಸಿದ್ದರು.