ಸುದ್ದಿ ಸಂಗ್ರಹ

Home ಸುದ್ದಿ ಸಂಗ್ರಹ

ಜಿಲ್ಲೆಯಲ್ಲಿ 4 ಪಾಸಿಟಿವ್, 10 ಗುಣ

ಜಿಲ್ಲೆಯಲ್ಲಿ ಶುಕ್ರವಾರ 4 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 10 ಜನರು ಗುಣಮುಖರಾಗಿದ್ದಾರೆಂದು ಜಿಲ್ಲಾಧಿ ಕಾರಿಗಳ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಜಿಲ್ಲೆಯ ಶಾಸಕರಿಗೆ ಉಸ್ತುವಾರಿ ನೀಡಲು ಕರವೇ ಆಗ್ರಹ

ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಜಿಲ್ಲೆಯ ಶಾಸಕರಲ್ಲೊಬ್ಬರನ್ನು ನೇಮಕ ಮಾಡುವಂತೆ ಕರವೇ ಜಿಲ್ಲಾಧ್ಯಕ್ಷ ಎಂ.ಎಸ್. ರಾಮೇಗೌಡ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ.

ಹಂತಕರ ವಿರುದ್ಧ ಕಠಿಣ ಕ್ರಮಕ್ಕೆ ಉಮಾ ಪ್ರಕಾಶ ಒತ್ತಾಯ

ಭರಮಸಾಗರ ಹೋಬಳಿ ಇಸಾಮುದ್ರದ  ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆಗೆ ಗುರಿಪಡಿಸುವಂತೆ ಮಹಾನಗರ ಪಾಲಿಕೆ ಸಾಯಿ ಸಮಿತಿ ಅಧ್ಯಕ್ಷರಾದ ಡಿ.ಎಸ್.ಉಮಾ ಪ್ರಕಾಶ್ ಒತ್ತಾಯಿಸಿದ್ದಾರೆ. 

ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯ ಮುಂದುವರಿಕೆಗೆ ತೇಜಸ್ವಿ ಮನವಿ

ಭದ್ರಾ ಕಾಡಾ ಅಧ್ಯಕ್ಷರಾದ ಪವಿತ್ರ ರಾಮಯ್ಯ ಅವರನ್ನೇ ಮುಂದು ವರಿಸಬೇಕೆಂದು ಭದ್ರಾ ಯೋಜನಾ ಮಟ್ಟದ ನೀರು ಬಳೆಕೆದಾರರ ಸಹಕಾರ ಸಂಘಗಳ ಮಹಾಮಂಡಳದ ನಿರ್ದೇಶಕ ತೇಜಸ್ವಿ ವಿ. ಪಟೇಲ್ ಅವರು ನೂತನ ಸಿ.ಎಂ. ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ.

ಹೆಸರಿನಂತೆ ಬಸವಣ್ಣನವರ ಆಡಳಿತ ನೀಡಿ : ಆನಂದರಾಜ್

ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಹೆಸರಿನಂತೆ ಹನ್ನೆರಡನೇ ಶತಮಾನದ ಬಸವಣ್ಣನವರ ಮಾದರಿ ಆಡಳಿತ ನೀಡುವಂತಾಗಲಿ ಎಂದು ಜಿಲ್ಲಾ ಶೋಷಿತ ವರ್ಗಗಳ ಒಕ್ಕೂಟದ ಅಧ್ಯಕ್ಷ ಬಾಡದ ಆನಂದರಾಜ್ ಅವರು ಆಶಿಸಿದ್ದಾರೆ.

ಸಂಕಷ್ಟ ಚತುರ್ಥಿ : ಹರಿಹರದಲ್ಲಿ ಮಹಾಗಣಪತಿಗೆ ವಿಶೇಷ ಪೂಜೆ

ಹರಿಹರ : ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಪ್ರಾಂಗಣದಲ್ಲಿರುವ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಅಂಗಾ ರಕ ಸಂಕಷ್ಟ ಚತುರ್ಥಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಏರ್ಪಡಿಸಲಾಗಿತ್ತು.

ಜನಸಂಖ್ಯೆ ನಿಯಂತ್ರಣ ಕಾಯ್ದೆ ಜಾರಿಗೆ ಬರಲಿ

ಕೂಡ್ಲಿಗಿ : ಉತ್ತರ ಪ್ರದೇಶ ಹಾಗೂ ಗುಜರಾತ್ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಜನಸಂಖ್ಯಾ ನಿಯಂತ್ರಣ ಕಾಯ್ದೆಯನ್ನು ಕರ್ನಾಟಕ ಸೇರಿದಂತೆ ದೇಶವ್ಯಾಪಿ ಕಾಯ್ದೆ ಜಾರಿಗೆ ತರಬೇಕು ಎಂದು ಶ್ರೀ ರಾಮಸೇನೆ ರಾಷ್ಟ್ರಾಧ್ಯಕ್ಷ ಪ್ರಮೋದ್ ಮುತಾಲಿಕ್ ಬಿಜೆಪಿ ಸರ್ಕಾ ರಕ್ಕೆ ಮನವಿ ಮಾಡಿದರು. 

ನೆಹರು ಓಲೇಕಾರ್‌ಗೆ ಸಚಿವ ಸ್ಥಾನ ನೀಡಲು ಛಲವಾದಿ ಸಭಾ ಒತ್ತಾಯ

ಛಲವಾದಿ ಸಮುದಾಯವನ್ನು ಪ್ರತಿನಿಧಿಸುವ, ಹಾವೇರಿ ಶಾಸಕ ನೆಹರು ಓಲೇಕಾರ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಜಿಲ್ಲಾ ಛಲವಾದಿ ಮಹಾಸಭಾ ಬಿಜೆಪಿ ವರಿಷ್ಠರನ್ನು ಒತ್ತಾಯಿಸಿದೆ.

7.5 ಲಕ್ಷಕ್ಕೂ ಅಧಿಕ ಮೌಲ್ಯದ ಪಡಿತರ ವಶ: ಇಬ್ಬರ ಬಂಧನ

ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿರುವ ಇಲ್ಲಿನ ಪೊಲೀಸರು ಇಬ್ಬರನ್ನು ಬಂಧಿಸಿ, 7.56 ಲಕ್ಷ ರೂ.ಗಳಿಗೂ ಅಧಿಕ ಮೌಲ್ಯದ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.

ಎಲ್ಲರಿಗೂ ಗುಣಮಟ್ಟದ ಆರೋಗ್ಯ ಸೇವೆ

ನವದೆಹಲಿ : ಕ್ಲಿನಿಕಲ್ ಎಸ್ಟಾಬ್ಲಿಷ್‌ಮೆಂಟ್ಸ್‌ ಕಾಯ್ದೆ ಅನ್ವಯ ಎಲ್ಲಾ ನಾಗರಿಕರಿಗೆ ಏಕರೂಪದ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಬೇಕು ಎಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಯೊಂದನ್ನು ದಾಖ ಲಿಸಲಾಗಿದ್ದು, ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ಕಳಿಸಲಾಗಿದೆ.

ಹಿಂಜಾವೇ-ಎಬಿವಿಪಿಯಿಂದ ಕಾರ್ಗಿಲ್ ವಿಜಯೋತ್ಸವ

ಹಿಂದೂ ಜಾಗರಣ ವೇದಿಕೆ, ಎಬಿವಿಪಿ ಸಹಯೋಗದಲ್ಲಿ‌ ನಗರದಲ್ಲಿ ಇಂದು ಸಂಜೆ‌ ಕಾರ್ಗಿಲ್ ವಿಜಯೋತ್ಸವದ 22ನೇ ವರ್ಷಾಚರಣೆ ಪ್ರಯುಕ್ತ ದೇಶ ರಕ್ಷಣೆಗೆ ತಮ್ಮ ಪ್ರಾಣಾರ್ಪಣೆ ಮಾಡಿದ ಹುತಾತ್ಮ ವೀರ ಯೋಧರ ಸ್ಮರಿಸಲಾಯಿತು.

ಅಭಿನಯ ಶಾರದೆ ಜಯಂತಿ ಇನ್ನಿಲ್ಲ

ಬೆಂಗಳೂರು : ಅಭಿನಯ ಶಾರದೆ ಎಂದೇ ಹೆಸರಾಗಿದ್ದ ಕನ್ನಡ ಚಿತ್ರರಂಗದ ಹಿರಿಯ ನಟಿ ಜಯಂತಿ ವಯೋಸಹಜ ಕಾಯಿಲೆಗಳಿಂದ ನಿಧನರಾಗಿದ್ದಾರೆ.  

ಶ್ರೀಧರ್ ಹತ್ಯೆ : ಪಾರದರ್ಶಕ ತನಿಖೆ

ಹರಪನಹಳ್ಳಿ : ಆರ್‍ಟಿಐ ಕಾರ್ಯಕರ್ತ ಟಿ. ಶ್ರೀಧರ್ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ 9 ಜನ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದ್ದು, ತನಿಖೆ ಕೈಗೊಂಡಿ ದ್ದೇವೆ.

ಪಿಯು ಪರೀಕ್ಷೆ : ಮಾಗನೂರು ಬಸಪ್ಪ ಕಾಲೇಜಿನ ಸಾಧನೆ

ಒಂದೇ ತಿಂಗಳಿನಲ್ಲಿ ಎರಡು ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸುವುದು ಅವೈಜ್ಞಾನಿಕ ಹಾಗೂ ಅವಾಸ್ತವ ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್‌ ಆರ್ಗನೈಸೇಷನ್ ವಿರೋಧ ವ್ಯಕ್ತಪಡಿಸಿದೆ.

ಶಾಸಕ ರಾಮಪ್ಪ ವಿರುದ್ಧ ನೆರೆ ಸಂತ್ರಸ್ತರ ಅಸಮಾಧಾನ

ನೊಂದ ಕುಟುಂಬಕ್ಕೆ ಪರಿಹಾರವನ್ನು ಕೊಡಿಸುವ ನಿಟ್ಟಿನಲ್ಲಿ ಹೆಜ್ಜೆಗಳನ್ನು ಹಾಕದೇ ತುಮಕೂರು ನಗರದಲ್ಲಿ ತಮ್ಮ ಪಕ್ಷದ ಐದು ಜಿಲ್ಲೆಯ ಕಾಂಗ್ರೆಸ್ ಮುಖಂಡರ ಸಭೆಗೆ ಹೋಗಿದ್ದರಿಂದ ತಾಲ್ಲೂಕಿನ ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಿಯು : ಲಲಿತಾ ಕಾಲೇಜಿನ ಸಾಧನೆ

ಒಂದೇ ತಿಂಗಳಿನಲ್ಲಿ ಎರಡು ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸುವುದು ಅವೈಜ್ಞಾನಿಕ ಹಾಗೂ ಅವಾಸ್ತವ ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್‌ ಆರ್ಗನೈಸೇಷನ್ ವಿರೋಧ ವ್ಯಕ್ತಪಡಿಸಿದೆ.

ಸಂಪುಟ ಪುನರ್‌ರಚನೆಯಾಗಲಿದೆ

ಮುಖ್ಯಮಂತ್ರಿ ಬದಲಾವಣೆಯ ವರದಿಗಳ ನಡುವೆಯೇ ಹೇಳಿಕೆ ನೀಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಸಂಪುಟ ಪುನರ್‌ರಚನೆಯಾಗಲಿದೆ ಎಂದು ಹೇಳಿದ್ದಾರೆ.

ಬಿಜೆಪಿ ರಾಜಕೀಯ ಕಿತ್ತಾಟಕ್ಕೆ ಜನರಿಂದಲೇ ತಕ್ಕ ಪಾಠ

ರಾಜ್ಯದ ಬಿಜೆಪಿಯಲ್ಲಿ ಬಹಳಷ್ಟು ರಾಜಕೀಯ ಕಿತ್ತಾಟ ನಡೆಯುತ್ತಿದೆ. ರಾಜ್ಯದ ಸಂಕಷ್ಟದ ಪರಿಸ್ಥಿತಿಯಲ್ಲಿ ಕೆಟ್ಟದಾಗಿ ಆಡಳಿತ ನಡೆಸುತ್ತಿರುವುದು ಸರಿಯಲ್ಲ, ಜನರು ಇದನ್ನು ಸಹಿಸುವುದಿಲ್ಲ, ಇದಕ್ಕೆ ತಕ್ಕ ಪಾಠ ಕಲಿಸುತ್ತಾರೆ

ವಿಶ್ವಚೇತನ ಕಾಲೇಜಿನ ಸಾಧನೆ

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ನಗರದ ವಿಶ್ವಚೇತನ ವಿದ್ಯಾನಿಕೇತನ ವಸತಿಯುತ ಪದವಿ ಪೂರ್ವ ಕಾಲೇಜು (ಜಿಡಿ0192)ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ, ಪ್ರಥಮ ಪಿಯುಸಿ ಆಧಾರದ ಮೇಲೆ  ಉತ್ತಮ ಅಂಕ ಪಡೆದಿದ್ದಾರೆ

ಜಿಲ್ಲೆಯಲ್ಲಿ 20 ಪಾಸಿಟಿವ್, 1 ಸಾವು, 29 ಗುಣಮುಖ

ಜಿಲ್ಲೆಯಲ್ಲಿ ಶುಕ್ರವಾರ 20 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು,  ಒಬ್ಬರು ಮೃತಪಟ್ಟಿದ್ದಾರೆ. 29 ಜನರು ಗುಣಮುಖರಾಗಿದ್ದಾರೆಂದು ಜಿಲ್ಲಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹೊನ್ನಾಳಿ – ನ್ಯಾಮತಿ ತಾ.ಗಳ ಅಭಿವೃದ್ಧಿಗೆ 25 ಕೋಟಿ ಮಂಜೂರು

ನ್ಯೂಜೆರ್ಸಿ ಕ್ರ್ಯಾಷ್ ಬ್ಯಾರಿಯರ್‍ಗಳನ್ನು ಅಳವಡಿಸುವ ಕಾಮಗಾರಿಗಳಿಗೆ 25 ಕೋಟಿ ರೂ.ಗಳ ಪರಿಷ್ಕೃತ ಅಂದಾಜು ಮೊತ್ತದ ಕಾಮಗಾರಿಗೆ ಜು. 22 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ

ಬೀದಿ ಬದಿ ವಾಪಾರಸ್ಥರು ಸುಂಕ ನೀಡದಂತೆ ಪಾಲಿಕೆ ಸೂಚನೆ

ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ವಿವಿಧ ಸ್ಥಳಗಳಲ್ಲಿ ನಿತ್ಯ ಹಾಗೂ ವಾರದ ಸಂತೆಗಳಲ್ಲಿ ಬೀದಿ ಬದಿ ವ್ಯಾಪಾರಸ್ಥರಿಂದ ಸುಂಕ ವಸೂಲಾತಿ ಮಾಡಲು ನೀಡಿದ ಕಾರ್ಯಾದೇಶದ ಅವಧಿ ಮುಕ್ತಾಯವಾಗಿದ್ದು, ಮುಂದಿನ ಹರಾಜು ಪ್ರಕ್ರಿಯೆ ನಡೆಸಿ, ಕಾರ್ಯಾದೇಶ ನೀಡುವವರೆಗೂ ಬೀದಿ ಬದಿ ವ್ಯಾಪಾರಿಗಳು ಸುಂಕ ನೀಡದಂತೆ ಸೂಚನೆ ನೀಡಲಾಗಿದೆ.

ಪ್ಯಾಕೇಜ್ ಟೆಂಡರ್ ರದ್ದುಪಡಿಸುವಂತೆ ಸ್ಥಳೀಯ ಗುತ್ತಿಗೆದಾರರ ಒತ್ತಾಯ

ಮಹಾತ್ಮಗಾಂಧಿ ನಗರ ವಿಕಾಸ ಯೋಜನೆ ಅಡಿಯಲ್ಲಿ ಕರೆದಿರುವ ಪ್ಯಾಕೇಜ್ ಟೆಂಡರ್ ರದ್ದುಪಡಿಸುವಂತೆ ಪಾಲಿಕೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಎನ್. ಸಿದ್ಧರಾಮಪ್ಪ ಒತ್ತಾಯಿಸಿದ್ದಾರೆ.

ಕೆ.ಎಸ್. ಈಶ್ವರಪ್ಪಗೆ ಮುಖ್ಯಮಂತ್ರಿ ಸ್ಥಾನಕ್ಕೆ ಒತ್ತಾಯ

ಬಿ.ಎಸ್. ಯಡಿಯೂರಪ್ಪ ಅವರನ್ನು ಬದಲಾಯಿಸುವುದಾದರೆ ಹಿಂದುಳಿದ ವರ್ಗದ ನಾಯಕ ಕೆ.ಎಸ್. ಈಶ್ವರಪ್ಪ ಅವರಿಗೆ ಮುಖ್ಯಮಂತ್ರಿ ಸ್ಥಾನವನ್ನು ಕೊಡುವಂತೆ ಜಿಲ್ಲಾ ಹಾಲುಮತ ಮಹಾಸಭಾ ಒತ್ತಾಯಿಸಿದೆ.