ದಾವಣಗೆರೆ, ಜ. 24- ಶಾಂತಿಸಾಗರ ಅಚ್ಚುಕಟ್ಟು ಪ್ರದೇಶದಲ್ಲಿ 2022-23ನೇ ಸಾಲಿನ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಜ.5 ರಿಂದ ಏ.30ರ ವರೆಗೆ ನೀರು ಹರಿಸಲು ತೀರ್ಮಾನಿಸಲಾಗಿದೆ. ಸಿದ್ದ ನಾಲಾ-60 ಕ್ಯೂಸೆಕ್ಸ್ ಮತ್ತು ಬಸವ ನಾಲಾ-45ಕ್ಕೆ ಕ್ಯೂಸೆಕ್ಸ್ನಂತೆ ಅರೆ ನೀರಾವರಿ ಮತ್ತು ತೋಟದ ಬೆಳೆಗಳನ್ನು ಬೆಳೆಯಲು ನಿರಂತರವಾಗಿ ನೀರು ಹರಿಸಲಾಗುತ್ತದೆ. ನಿಯಮಿತ ಪ್ರಮಾಣಕ್ಕಿಂತ ಹೆಚ್ಚು ನೀರು ಬಳಸುವವರು ಮತ್ತು ಅನಧಿಕೃತ ನೀರಾವರಿ ಬೆಳೆಗಾರರಿಗೆ ಕರ್ನಾಟಕ ನೀರಾವರಿ ಕಾಯ್ದೆ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
January 31, 2023