ವಿಶೇಷ ಭೂಸ್ವಾಧೀನ ಅಧಿಕಾರಿ, ಕಚೇರಿ ವ್ಯವಸ್ಥಾಪಕ ಲೋಕಾಯುಕ್ತ ಬಲೆಗೆ

ದಾವಣಗೆರೆ, ಜ.20- ಭೂಮಿ ಕಳೆದುಕೊಂಡವರಿಗೆ ಪರಿಹಾರ ನೀಡಲು ಲಂಚ ಸ್ವೀಕರಿಸುವಾಗ ವಿಶೇಷ ಭೂಸ್ವಾಧೀನ ಅಧಿಕಾರಿ ಹಾಗೂ ಕಚೇರಿ ವ್ಯವಸ್ಥಾಪಕ ಲೋಕಾಯುಕ್ತ ಕೈಗೆ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ.

ವಿಶೇಷ ಭೂಸ್ವಾಧೀನ ಅಧಿಕಾರಿ ಜಿ.ಡಿ. ಶೇಖರ್ ಹಾಗೂ ಕಚೇರಿ ವ್ಯವಸ್ಥಾಪಕ ಶ್ರೀನಿವಾಸ್ ಲೋಕಾಯುಕ್ತರ ಬಲೆಗೆ ಬಿದ್ದವರು.

ದಾವಣಗೆರೆ, ಹಾವೇರಿ ಸೇರಿ ಆರು ಜಿಲ್ಲೆಗಳ ವ್ಯಾಪ್ತಿಯ ಜವಾಬ್ದಾರಿಯನ್ನು ದಾವಣಗೆರೆ ವಿಶೇಷ ಭೂ ಸ್ವಾಧೀನ ಅಧಿಕಾರಿ ಜಿ.ಡಿ. ಶೇಖರ್ ಹೊಂದಿದ್ದರು. ಹಲವಾರು ಜನರು ಜಮೀನು ಕಳೆದುಕೊಂಡಿದ್ದರು. ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿರುವ ಇಲಾಖೆಯ ಕಚೇರಿಯಲ್ಲಿ ಈ ಇಬ್ಬರು ಅಧಿಕಾರಿಗಳು ಪರಿ ಹಾರ ಹಣ ಬಿಡುಗಡೆಗೆ ಹಾವೇರಿ ತಾಲ್ಲೂಕಿನ ಕೋಳೂರು ಗ್ರಾಮದ ಸಂತೋಷ ಎಂಬುವರಿಂದ ಭೂಮಿ ಕಳೆದುಕೊಂಡವರಿಗೆ ಪರಿಹಾರ ನೀಡಲು 30 ಸಾವಿರ ರೂ. ಲಂಚವನ್ನು ಸ್ವೀಕರಿಸುವಾಗ, ದಾವಣಗೆರೆ  ಲೋಕಾಯುಕ್ತ ಎಸ್ಪಿ ಎಂ.ಎಸ್. ಕೌಲಾಪುರೆ ನೇತೃತ್ವದಲ್ಲಿ  ಇನ್ಸ್ ಪೆಕ್ಟರ್ ಗಳಾದ ಆಂಜನೇಯ ಹಾಗೂ ರಾಷ್ಟ್ರಪತಿ ದಾಳಿ ನಡೆಸಿದ್ದು, ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ.