ಸೂರಗೊಂಡನಕೊಪ್ಪಕ್ಕೆ ತಾಂಡಾ ಅಭಿವೃದ್ದಿ ನಿಗಮದ ಅಧ್ಯಕ್ಷರ ಭೇಟಿ, ಪರಿಶೀಲನೆ

ಸೂರಗೊಂಡನಕೊಪ್ಪಕ್ಕೆ ತಾಂಡಾ ಅಭಿವೃದ್ದಿ ನಿಗಮದ ಅಧ್ಯಕ್ಷರ ಭೇಟಿ, ಪರಿಶೀಲನೆ

ಹೊನ್ನಾಳಿ, ನ.4- ನ್ಯಾಮತಿ ತಾಲ್ಲೂಕು ಸೂರಗೊಂಡನಕೊಪ್ಪ ಗ್ರಾಮಕ್ಕೆ  ತಾಂಡಾ ಅಭಿವೃದ್ದಿ ನಿಗಮದ ಅಧ್ಯಕ್ಷ ಪಿ. ರಾಜೀವ್ ಅವರು ನಿನ್ನೆ ಭೇಟಿ ನೀಡಿ, ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ನಡೆಸಿದರು.

ಹೊನ್ನಾಳಿ ತಾಲ್ಲೂಕು ಬಂಜಾರ ಸಮಾಜದ ನೂತನ ಅಧ್ಯಕ್ಷ ಹನುಮಸಾಗರದ ಜುಂಜಾನಾಯ್ಕ ಅವರನ್ನು ಸಂತ ಸೇವಾಲಾಲ್ ಮಹಾಮಠ ಸಮಿತಿ ವತಿಯಿಂದ ಸನ್ಮಾನಿಸಿ ಮಾತನಾಡಿದ ಅವರು, ಬಂಜಾರ ಸಮಾಜದ ಅಭಿವೃದ್ಧಿಗೆ ಉತ್ತಮ ಕಾರ್ಯ ಯೋಜನೆ ಹಮ್ಮಿಕೊಳ್ಳುವಂತೆ ಕರೆ ನೀಡಿದರು.

ಮಹಾಮಠ ಸಮಿತಿ ಅಧ್ಯಕ್ಷರು ಹಾಗೂ ಮಾಜಿ ಸಚಿವ ರುದ್ರಪ್ಪ ಲಮಾಣಿ ಮಾತನಾಡಿ, ಸಂತ ಸೇವಾಲಾಲ್ ಜಯಂತಿ ಉತ್ತಮವಾಗಿ ನಡೆಯಲು ಇಲ್ಲಿನ ಜನತೆಯ ಸಹಕಾರ ನಿರಂತರವಾಗಿದೆ. ಸೂರಗೊಂಡನಕೊಪ್ಪ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು
ತ್ವರಿತಗತಿಯಲ್ಲಿ ನಡೆಯುವಂತೆ ನೋಡಿಕೊಳ್ಳಬೇಕು ಎಂದರು. 

ಈ ಸಂದರ್ಭದಲ್ಲಿ ಶಾಸಕ ಎಂ.ಪಿ. ರೇಣುಕಾಚಾರ್ಯ, ಬಿಜೆಪಿ ಅಧ್ಯಕ್ಷ ಸುರೇಶ್, ತಾಂಡಾ ಅಭಿವೃದ್ದಿ ನಿಗಮದ ನಿರ್ದೇಶಕ ಮಾರುತಿ ನಾಯ್ಕ, ಮಹಾಮಠ ಸಮಿತಿ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾಯ್ಕ ಸದಸ್ಯ ಶಿವಕುಮಾರ್, ಜಿ.ಪಂ. ಅಧ್ಯಕ್ಷರಾದ ಶ್ರೀಮತಿ ದೀಪಾ ಜಗದೀಶ್, ಸದಸ್ಯ ಸುರೇಂದ್ರ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published.