ಹಂಚಿಹೋಗಿದ್ದ ಕರ್ನಾಟಕವನ್ನು ಒಗ್ಗೂಡಿಸಿದವರನ್ನು ಸ್ಮರಿಸಬೇಕಿದೆ

ಹಂಚಿಹೋಗಿದ್ದ ಕರ್ನಾಟಕವನ್ನು ಒಗ್ಗೂಡಿಸಿದವರನ್ನು ಸ್ಮರಿಸಬೇಕಿದೆ

ಕೂಡ್ಲಿಗಿ: ತಾಲ್ಲೂಕು ಆಡಳಿತದ ರಾಜ್ಯೋತ್ಸವದಲ್ಲಿ ತಹಶೀಲ್ದಾರ್ ಮಹಾಬಲೇಶ್ವರ

ಕೂಡ್ಲಿಗಿ, ನ. 4 – ಹರಿದು ಹಂಚಿಹೋಗಿದ್ದ ಕರ್ನಾಟಕವನ್ನು ಒಗ್ಗೂಡಿಸಿದ ಮಹನೀಯರನ್ನು ಸ್ಮರಿಸುವ ಮೂಲಕ ಕನ್ನಡ ನಾಡಿನ ಪರಂಪರೆಯನ್ನು ಯುವ ಪೀಳಿಗೆ ತಿಳಿಯಬೇಕಾದ ಅಗತ್ಯತೆ ಇದೆ ಎಂದು ಕೂಡ್ಲಿಗಿ ತಹಶೀಲ್ದಾರ್ ಮಹಾಬಲೇಶ್ವರ ಅಭಿಪ್ರಾಯಪಟ್ಟರು. 

ತಾಲ್ಲೂಕು ಆಡಳಿತದಿಂದ ಮೊನ್ನೆ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭುವನೇಶ್ವರಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. 

ಹೈದ್ರಾಬಾದ್ ಕರ್ನಾಟಕ, ಮುಂಬೈ ಕರ್ನಾಟಕ, ಹಳೇ ಮೈಸೂರು ಭಾಗದಲ್ಲಿ ಹರಿದು ಹಂಚಿ ಹೋಗಿದ್ದ ಕರ್ನಾಟಕದ ಪ್ರದೇಶಗಳನ್ನು ಒಗ್ಗೂಡಿಸಿ ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ನಾಮಕರಣ ಮಾಡುವುದಕ್ಕೆ ಕನ್ನಡದ ಸಾಹಿತಿಗಳು, ವೈಚಾರಿಕ ಬರಹಗಾರರು, ಹೋರಾಟಗಾರರು, ಅನಕ್ಷರಸ್ಥ ಕನ್ನಡ ಭಾಷೆ ಮಾತನಾಡುವ ಜನತೆ ನಿರಂತರ ಹೋರಾಟ ಮಾಡಿದ್ದು ಇವರನ್ನು ಸ್ಮರಣೆ ಮಾಡುವುದರ ಮೂಲಕ ಕನ್ನಡ ನಾಡಿನ ಹಿರಿಮೆಯನ್ನು ಶ್ಲಾಘಿಸಬೇಕಿದೆ ಎಂದರು. 

ಕನ್ನಡ ಭಾಷೆಗೆ ಸಹಸ್ರಾರು ವರ್ಷಗಳ ಇತಿಹಾಸವಿದ್ದು, ಇಂತಹ ಭಾಷೆಯ ಮೌಲಿಕತೆಯನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು. 

Leave a Reply

Your email address will not be published.