ಕಾನೂನು ನೆರವು ಸಹಾಯವಾಣಿ

ಕಾನೂನು ನೆರವು ಸಹಾಯವಾಣಿ

ದಾವಣಗೆರೆ, ಮೇ 5- ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಜನಸಾಮಾನ್ಯರಿಗೆ ಕಾನೂನು ಸೇವೆ ಒದಗಿಸಲು, ಸಹಾಯವಾಣಿ ಕಾರ್ಯ ನಿರ್ವಹಿಸುತ್ತಿದ್ದು, ಜಿಲ್ಲಾ ಮಟ್ಟದಲ್ಲಿಯೂ ಕಾನೂನು ಸೇವಾ ಸಹಾಯವಾಣಿಯನ್ನು ಆರಂಭಿಸಿದೆ.

ಸಹಾಯವಾಣಿ ಕೇಂದ್ರದಲ್ಲಿ ಮೂವರು ಪ್ಯಾನಲ್ ವಕೀಲರು ಕಾರ್ಯ ನಿರ್ವಹಿಸುತ್ತಿದ್ದಾರೆ. ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರಿಗಾಗಿ ದಾವಣಗೆರೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಲ್ಲಿಯೂ ಸಹ ಕಾನೂನು ಸೇವಾ ಸಹಾಯವಾಣಿ ಸಂಖ್ಯೆ: 08192-296364, ಮೊ: 9481167005 ಕಾರ್ಯ ನಿರ್ವಹಿಸುತ್ತಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಪ್ರವೀಣ್ ನಾಯಕ್ ತಿಳಿಸಿದ್ದಾರೆ.

Leave a Reply

Your email address will not be published.