ನೂತನ ಶಿಕ್ಷಣ ನೀತಿಯಂತೆ ಪದವಿ ಕೋರ್ಸ್

ದಾವಣಗೆರೆ ಏ.18 – ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ದಾವಣಗೆರೆ ನಗರ ವ್ಯಾಪ್ತಿಯಲ್ಲಿರುವ ಬಿ.ಡಿ. ಲೇಔಟ್, ಬಾಷಾ ನಗರ, ಎಸ್.ಕೆ.ಪಿ ರಸ್ತೆ ಇಲ್ಲಿನ ಪಡಿತರ ಚೀಟಿದಾರರ ಹಿತದೃಷ್ಟಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಟಿಯಿಂದ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ನಿಯಮಾನುಸಾರ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದೃಢೀಕೃತ ದಾಖಲೆಗಳೊಂದಿಗೆ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 30 ದಿವಸದೊಳಗಾಗಿ ಜಂಟಿ ನಿರ್ದೇಶಕರು, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ದಾವಣಗೆರೆ ಇವರಿಗೆ ಸಲ್ಲಿಸಬೇಕು. ಅವಧಿಯ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. 

ಅರ್ಜಿಯನ್ನು ಜಂಟಿ ನಿರ್ದೇಶಕರು, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ದಾವಣಗೆರೆ ಇವರಿಗೆ ಸಲ್ಲಿಸತಕ್ಕದ್ದು. ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ಕಚೇರಿ ಅಥವಾ ತಹಶೀಲ್ದಾರ್, ದಾವಣಗೆರೆ ತಾಲ್ಲೂಕು ಕಚೇರಿಯಿಂದ ಪಡೆಯಬಹುದು. ಖಾಸಗಿ ವ್ಯಕ್ತಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.