36 ಪಾಸಿಟಿವ್, 68 ಗುಣಮುಖ

ದಾವಣಗೆರೆ, ಜು.10- ಜಿಲ್ಲೆಯಲ್ಲಿ ಶನಿವಾರ 36 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಇಬ್ಬರು ಮೃತಪಟ್ಟಿದ್ದಾರೆ. 68 ಜನರು ಗುಣಮುಖರಾಗಿದ್ದಾರೆಂದು ಜಿಲ್ಲಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ದಾವಣಗೆರೆ ತಾಲ್ಲೂಕಿನಲ್ಲಿ 19, ಹರಿಹರ 3, ಚನ್ನಗಿರಿ 8, ಹೊನ್ನಾಳಿ ತಾಲ್ಲೂಕಿನ 5 ಹಾಗೂ ಹೊರ ಜಿಲ್ಲೆಯ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಜಿಲ್ಲೆಯಲ್ಲಿ 587 ಸಕ್ರಿಯ ಪ್ರಕರಣಗಳಿದ್ದು, ಇಲ್ಲಿಯವರೆಗೆ 580 ಜನರು ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.