15 ವಿಕಲಚೇತನರಿಗೆ ಯಂತ್ರಚಾಲಿತ ವಾಹನ ವಿತರಿಸಿದ ಶಾಸಕ ಎಸ್‌ಎಆರ್

ದಾವಣಗೆರೆ, ಜು.30-ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಲ್ಲಿ 10 ಹಾಗೂ ಜಿಲ್ಲಾ ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 5 ಸೇರಿ ಒಟ್ಟು 15 ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ಶಾಸಕ ಎಸ್.ಎ. ರವೀಂದ್ರ ನಾಥ್ ಅವರು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಆವರಣದಲ್ಲಿ ಆಯ್ದ ಫಲಾನುಭವಿಗಳಿಗೆ ವಿತರಣೆ ಮಾಡಿದರು.