ಜಿಲ್ಲೆಯಲ್ಲಿ 5 ಪಾಸಿಟಿವ್ 13 ಗುಣ

ದಾವಣಗೆರೆ, ಆ.30- ಜಿಲ್ಲೆಯಲ್ಲಿ ಸೋಮವಾರ 5 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 13 ಜನ ಗುಣಮುಖರಾಗಿದ್ದಾರೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ದಾವಣಗೆರೆ ತಾಲ್ಲೂಕು 2, ಹರಿಹರ 1, ಜಗಳೂರು 1 ಹಾಗೂ ಹೊನ್ನಾಳಿ ತಾಲ್ಲೂಕಿನ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ 242 ಸಕ್ರಿಯ ಪ್ರಕರಣಗಳಿವೆ.