ಮುಸ್ಲಿಂ ಮಹಿಳಾ ಒಕ್ಕೂಟದಿಂದ ಮನವಿ

ಮುಸ್ಲಿಂ ಮಹಿಳಾ ಒಕ್ಕೂಟದಿಂದ ಮನವಿ

ದಾವಣಗೆರೆ, ಫೆ.8- ಪ್ರಧಾನ ಮಂತ್ರಿ 15 ಅಂಶಗಳ ಕಾರ್ಯಕ್ರಮ ಅನುಷ್ಠಾನ ಸಮಿತಿ ನಿರಂತರವಾಗಿ ನಡೆಸಲು ಒತ್ತಾಯಿಸಿ, ಮುಸ್ಲಿಂ ಮಹಿಳಾ ಒಕ್ಕೂಟ ದಾವಣಗೆರೆ ವತಿಯಿಂದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಪ್ರಧಾನಮಂತ್ರಿ 15 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕಾಗಿ ಜಿಲ್ಲೆಯಲ್ಲಿ ಜಿಲ್ಲಾ ಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯ ಬೇಕಾಗಿದೆ. ಆದರೆ ನಿರಂತರವಾಗಿ ಸಭೆಯು ನಡೆಯುತ್ತಿಲ್ಲ. ಹಾಗಾಗಿ ಸಮಿತಿ ಸಭೆಯನ್ನು ನಡೆಸುವಂತೆ ಒಕ್ಕೂಟದ ಪದಾಧಿಕಾರಿಗಳು ಒತ್ತಾಯಿಸಿದರು.  ಎಲ್ಲಾ ಇಲಾಖೆಗಳಲ್ಲಿ ಪ್ರಧಾನಮಂತ್ರಿ 15 ಅಂಶಗಳ ಕಾರ್ಯಕ್ರಮ ಕುರಿತು ಕ್ರಿಯಾ ಯೋಜನೆಯನ್ನು ಅನುಷ್ಠಾನಗೊಳಿಸಬೇಕು. ಈ ಸಮಿತಿ ಸಭೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಿರಂತರವಾಗಿ ನಡೆಸಲೇಬೇಕು  ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷೆ ನಾಹೇರ ಬಾನು, ಪ್ರಧಾನ ಕಾರ್ಯದರ್ಶಿ ಜಬೀನಾ ಖಾನಂ, ಎಂ. ಕರಿಬಸಪ್ಪ, ಹಸೀನಾ ಸೇರಿದಂತೆ ಇತರರು ಇದ್ದರು.