ಬಿಐಹೆಚ್ಇ ಡಿಪಾರ್ಟ್‌ಮೆಂಟ್ ಆಫ್ ಕಾಮರ್ಸ್ ಕಾಲೇಜಿಗೆ ಸಿಎ ಫಲಿತಾಂಶ

ದಾವಣಗೆರೆ, ಮಾ. 10- ದಿ ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿದ ಸಿಎ ಫೌಂಡೇಷನ್ ಪರೀಕ್ಷೆಯಲ್ಲಿ  ನಗರದ ಬಾಪೂಜಿ ಇನ್‌ಸ್ಟಿಟ್ಯೂಟ್ ಆಫ್ ಹೈಟೆಕ್ ಎಜುಕೇಷನ್ ಡಿಪಾರ್ಟ್‌ಮೆಂಟ್ ಆಫ್ ಕಾಮರ್ಸ್ ಕಾಲೇಜಿನ ವಿದ್ಯಾರ್ಥಿ ಅಭಿಷೇಕ್ ಎ. ಜಾಧವ್ ಅವರು ತೇರ್ಗಡೆ ಹೊಂದಿದ್ದಾರೆ ಎಂದು ಕಾಲೇಜಿನ ನಿರ್ದೇಶಕ ಡಾ. ಹೆಚ್.ವಿ. ಸ್ವಾಮಿ ತ್ರಿಭುವಾನಂದ ತಿಳಿಸಿದ್ದಾರೆ. ಅಭಿಷೇಕ್‌ ಸಾಧನೆಗೆ ಬಾಪೂಜಿ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ಡಾ ಶಾಮನೂರು ಶಿವಶಂಕರಪ್ಪ, ಜಂಟಿ ಕಾರ್ಯದರ್ಶಿ ಎಸ್.ಎಸ್. ಮಲ್ಲಿಕಾರ್ಜುನ್, ಕಾಲೇಜಿನ ಅಧ್ಯಕ್ಷ ಅಥಣಿ ಎಸ್. ವೀರಣ್ಣ, ಪ್ರಾಂಶುಪಾಲ ಡಾ. ಬಿ. ವೀರಪ್ಪ ಅಭಿನಂದಿಸಿದ್ದಾರೆ.